ಕರಾವಳಿ

ರೈತರ, ಕಾರ್ಮಿಕರ ಹಾಗೂ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ; ಸಂಸದ ನಳಿನ್ ಕುಮಾರ್ ಕಟೀಲ್

Pinterest LinkedIn Tumblr

ಮಂಗಳೂರು : ರೈತರ, ಕಾರ್ಮಿಕರ ಹಾಗೂ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ಇದಾಗಿದೆ. ರೈತರ ಬ್ಯಾಂಕ್ ಖಾತೆಗೆ ನೇರವಾಗಿ 6 ಸಾವಿರ ರೂ. ಪಾವತಿಸುವುದು ಐತಿಹಾಸಿಕ ಕ್ರಮವಾಗಿದೆ. ಮೀನುಗಾರಿಕೆ ಪ್ರತ್ಯೇಕ ಸಚಿವಾಲಯ ಘೋಷಿಸುವ ಮೂಲಕ ಮೀನುಗಾರರ ದಶಕಗಳ ಹಿಂದಿನ ಬೇಡಿಕೆ ಈಡೇರಿಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಸಂತಸ ವ್ಯಕ್ತ ಪಡಿಸಿದ್ದಾರೆ.

ಬಜೆಟ್‌ನಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿದೆ. ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 2.50 ಲಕ್ಷ ರೂ.ಗಳಿಂದ 5 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮೂಲಕ ಪ್ರಧಾನಿ ಮೋದಿ ಅವರು ಮಧ್ಯಮ ವರ್ಗದವರಿಗೆ ಮಹತ್ವದ ಕೊಡುಗೆ ನೀಡಿದ್ದಾರೆ.

ಬ್ರಾಡ್‌ಗೇಜ್ ಮಾರ್ಗದಲ್ಲಿ ಮಾನವ ರಹಿತ ರೈಲ್ವೆ ಕ್ರಾಸಿಂಗ್ ನಿರ್ಮಾಣ, ಹೈನುಗಾರಿಕೆ ಉತ್ತೇಜನಕ್ಕೆ ಕಾಮಧೇನು ಯೋಜನೆ , ನೈಸರ್ಗಿಕ ವಿಕೋಪಕ್ಕೆ ಒಳಗಾದ ರೈತರಿಗೆ ಶೇ.2 ಬಡ್ಡಿ ರಿಯಾಯಿತಿ, ಸಾಲ ಮರುಪಾವತಿ ಮಾಡಿದ ರೈತರಿಗೆ ಶೇ.3 ಬಡ್ಡಿ ವಿನಾಯಿತಿ, ಸುಮಾರು 10 ಕೋಟಿ ಕಾರ್ಮಿಕರಿಗೆ ಪಿ‌ಎಂ ಪಿಂಚಣಿ ಯೋಜನೆ, ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ, ಅಸಂಘಟಿತ ವಲಯದಲ್ಲಿ 60 ವರ್ಷ ದಾಟಿದ ಕಾರ್ಮಿಕರಿಗೆ ಪ್ರತಿ ತಿಂಗಳು 3 ಸಾವಿರ ರೂ. ಪಿಂಚಣಿ ಸ್ವಾಗತಾರ್ಹ ಯೋಜನೆಗಳಾಗಿವೆ ಎಂದು ಸಂಸದರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Comments are closed.