ಕರಾವಳಿ

ಯುವ ವೈದ್ಯರು ಗ್ರಾಮೀಣ ಭಾಗದಲ್ಲಿ ಹೆಚ್ಚೆಚ್ಚು ಸೇವೆ ಸಲ್ಲಿಸಬೇಕು: ಸಚಿವೆ ಡಾ. ಜಯಮಾಲಾ

Pinterest LinkedIn Tumblr

ಉಡುಪಿ: ವೈದ್ಯರು ತಮ್ಮ ಸೇವಾವಧಿಯಲ್ಲಿ ಗ್ರಾಮೀಣ ಭಾಗದಲ್ಲಿನ ಜನತೆಗೆ ಹೆಚ್ಚಿನ ಸೇವೆ ಒದಗಿಸಬೇಕು, ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವ ವೈದ್ಯರು ಹೆಚ್ಚು ಗೌರವಾರ್ಹರು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ತಿಳಿಸಿದ್ದಾರೆ. ಅವರು ಸೋಮವಾರ ಹಟ್ಟಿಯಂಗಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟಿಸಿ ಮಾತನಾಡಿದರು.

ಜನಸೇವೆ ಜನಾರ್ಧನ ಸೇವೆಯಾಗಬೇಕು, ಆಸ್ಪತ್ರೆಗೆ ಬರುವ ರೋಗಿಗಳನ್ನು ಸೂಕ್ತ ರೀತಿಯಲ್ಲಿ ಪರೀಕ್ಷಿಸಿ, ಖಾಯಿಲೆಯನ್ನು ಗುಣಪಡಿಸಬೇಕು, ಯುವ ವೈದ್ಯರು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸೇವೆ ಸಲ್ಲಿಸಬೇಕು ಎಂದು ಡಾ. ಜಯಮಾಲಾ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಮಾತನಾಡಿ, ವಂಡ್ಸೆ ಭಾಗಕ್ಕೆ 108 ವಾಹನ ಒದಗಿಸುವಂತೆ ಸಚಿವರಲ್ಲಿ ಕೋರಿ, ಈ ಭಾಗದ ರಸ್ತೆಗಳ ಅಭಿವೃದ್ದಿಗೆ ಹೆಚ್ಚಿನ ಒತ್ತು ನೀಡಿರುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬು ಶೆಟ್ಟಿ, ಜ್ಯೋತಿ ಹರೀಶ್, ಶಂಕರ ಪೂಜಾರಿ, ಹಟ್ಟಿಯಂಗಡಿ ಗ್ರಾ.ಪಂ. ಅಧ್ಯಕ್ಷ ರಾಜೇಶ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರೋಹಿಣಿ ಸ್ವಾಗತಿಸಿದರು.

Comments are closed.