ಕರಾವಳಿ

259 ಮಂದಿಗೆ ಹಕ್ಕುಪತ್ರ ವಿತರಿಸಿದ ಉಸ್ತುವಾರಿ ಸಚಿವೆ ಡಾ. ಜಯಮಾಲಾ

Pinterest LinkedIn Tumblr

ಉಡುಪಿ: ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಹೋಬಳಿ ಹಾಗೂ ಬೈಂದೂರು ತಾಲೂಕಿಗೆ ಸಂಬಂದಿಸಿದಂತೆ 94 ಸಿ ಯೋಜನೆಯಲ್ಲಿ ಒಟ್ಟು 259 ಮಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಸೋಮವಾರ ತ್ರಾಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಕ್ಕುಪತ್ರ ವಿತರಿಸಿದರು.

ನಂತರ ಮಾತನಾಡಿದ ಸಚಿವರು, ಸರ್ಕಾರ ಜನರ ಬಳಿಗೆ ಬಂದು ಸವಲತ್ತು ವಿತರಿಸುತ್ತಿದೆ, 94 ಸಿ ಯೋಜನೆಯಲ್ಲಿ ಹಕ್ಕುಪತ್ರ ಪಡೆದವರು ಅನೇಕ ವರ್ಷಗಳ ತಮ್ಮ ಕನಸನ್ನು ನನಸಾಗಿಸಿಕೊಂಡಿದ್ದಾರೆ, 94 ಸಿ ಮಾತ್ರವಲ್ಲದೇ ಸರ್ಕಾರದ ವಿವಿಧ ವಸತಿ ಯೋಜನೆಗಳ ಪ್ರಯೋಜನವನ್ನು ಪ್ರತಿ ನಾಗರೀಕರು ಪಡೆಯುವಂತೆ ತಿಳಿಸಿದ ಸಚಿವರು, ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತೆ ಹೇಳಿದರು.

ಇದೇ ಸಂದರ್ಭದಲ್ಲಿ 29 ವಿಧವಾ ವೇತನ, 49 ಸಂಧ್ಯಾ ಸುರಕ್ಷಾ, 2 ವೃದ್ದಾಪ್ಯ ವೇತನ ಸೌಲಭ್ಯವನ್ನು ಸಚಿವರು ವಿತರಿಸಿದರು. ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬು ಶೆಟ್ಟಿ, ರೋಹಿತ್ ಶೆಟ್ಟಿ, ಸುರೇಶ್ ಬಟವಾಡೆ, ಜ್ಯೋತಿ ಹರೀಶ್, ಗೌರಿ ದೇವಾಡಿಗ, ಶೋಭಾ ಪುತ್ರನ್, ಕುಂದಾಪುರ ತಾ.ಪಂ. ಅಧ್ಯಕ್ಷೆ ಶ್ಯಾಮಲಾ ಕುಂದರ್, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತ್ನ ವಿವಿಧ ಜನಪ್ರತಿನಿಧಿಗಳು ಹಾಗೂ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಮತ್ತಿತರರು ಉಪಸ್ಥಿತರಿದ್ದರು.

Comments are closed.