ಕರಾವಳಿ

ಕೋಟ ಜೋಡಿ ಕೊಲೆ ಪ್ರಕರಣ ನಡೆದ ಮನೆಯಲ್ಲಿ ಮಹಜರು; ಕೃತ್ಯಕ್ಕೆ ಬಳಸಿದ್ದ 2 ಬೈಕ್ ವಶ

Pinterest LinkedIn Tumblr

ಕುಂದಾಪುರ: ಕೋಟ ಮಣೂರು ಚಿಕ್ಕನಕೆರೆಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ರಾಜಶೇಖರ್ ರೆಡ್ಡಿಯನ್ನು ಪೊಲೀಸರು ಶನಿವಾರ ಕೃತ್ಯ ನಡೆದ ಲೋಹಿತ್ ಪೂಜಾರಿಯ ಮನೆಗೆ ಕರೆತಂದು ಮಹಜರು ನಡೆಸಿದರು.ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 6 ಆರೋಪಿಗಳನ್ನು ಬಂಧಿಸಿ ಕುಂದಾಪುರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಎಂಟು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಕೃತ್ಯಕ್ಕೆ ಬಳಸಿದ್ದ ಎರಡು ಬೈಕ್ ವಶಕ್ಕೆ…
ಸಂದರ್ಭ ಕೃತ್ಯಕ್ಕೆ ಯಾವ ರೀತಿ ಸಂಚು ನಡೆಸಲಾಗಿತ್ತು, ಯಾವ ರೀತಿ ಪರಾರಿಯಾಗಲಾಯಿತು ಎನ್ನುವ ಕುರಿತು ಆರೋಪಿಯಿಂದ ಪೊಲೀಸರು ಸಮಗ್ರ ಮಾಹಿತಿ ಪಡೆದರು. ಈ ಸಂದರ್ಭ ಕೃತ್ಯ ನಡೆಸಿದ ಆರೋಪಿಗಳು ಎರಡು ಬೈಕ್‌ಗಳಲ್ಲಿ ಮೂಡುಗೋಪಾಡಿಯ ತಂಪುಪಾನಿಯ ಘಟಕವೊಂದಕ್ಕೆ ತೆರಳಿ, ಅಲ್ಲಿಂದ ಕಾರಿನಲ್ಲಿ ಬೇರೆ-ಬೇರೆ ಕಡೆಗೆ ಪರಾರಿಯಾಗಿದ್ದರು. ಮೂಡುಗೋಪಾಡಿಯ ಆ ತಂಪು ಪಾನೀಯ ಘಟಕಕ್ಕೆ ತೆರಳಿ ಕೃತ್ಯಕ್ಕೆ ಬಳಸಿದ ಎರಡು ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದರು.

ಈ ಸಂದರ್ಭ ಡಿವೈ‌ಎಸ್‌ಪಿ ಟಿ. ಜಯಶಂಕರ್ ಹಾಗೂ ಮಣಿಪಾಲ ವೃತ್ತನಿರೀಕ್ಷಕ ಸುದರ್ಶನ, ಕೋಟ ಠಾಣಾಧಿಕಾರಿ ನರಸಿಂಹ ಶೆಟ್ಟಿ ಹಾಗೂ ತನಿಖಾ ತಂಡದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿರಿ: 

ಕೋಟದಲ್ಲಿ ತಲವಾರು ದಾಳಿ: ಕ್ಷುಲ್ಲಕ ಕಾರಣಕ್ಕೆ ಹರಿಯಿತು ಇಬ್ಬರ ನೆತ್ತರು (Updated)

ಆಪ್ತಮಿತ್ರರಿಬ್ಬರ ಬರ್ಬರ ಕೊಲೆ ಪ್ರಕರಣ: ಕೋಟ ಹೆದ್ದಾರಿಯಲ್ಲಿ ಶವವಿಟ್ಟು ಪ್ರತಿಭಟನೆ (Video)

ಟಾಯ್ಲೆಟ್ ಪಿಟ್ ನಿರ್ಮಾಣದ ತಕರಾರು: ಆಪ್ತ ಮಿತ್ರರಿಬ್ಬರ ಮೇಲೆ ತಲವಾರು ಬೀಸಿದ ಹಂತಕರು

ಕೋಟ ಆಪ್ತಮಿತ್ರರನ್ನು ಕೊಂದ ಕೊಲೆಗಾರರ ಪತ್ತೆಗೆ ಚುರುಕುಗೊಂಡ ತನಿಖೆ

ಕೋಟದಲ್ಲಿ ಸ್ನೇಹಿತರಿಬ್ಬರ ಮರ್ಡರ್ ಕೇಸ್: ಆರೋಪಿಗಳಿಗಾಗಿ ಮುಂದುವರಿದ ಶೋಧ

ಕೋಟ ಅವಳಿ ಕೊಲೆ: ಹರೀಶ್ ರೆಡ್ಡಿ ಸಹಚರರು ಇನ್ನೂ ಭೂಗತ!

ಇನ್ನೂ ಪತ್ತೆಯಾಗದ ಕೊಲೆಗಾರರು; ನ್ಯಾಯಕ್ಕಾಗಿ ಆಗ್ರಹಿಸಿ ಫೆ.3ಕ್ಕೆ ಕೋಟ ಬಂದ್

ಕೋಟದಲ್ಲಿ ಅವಳಿ ಕೊಲೆ ಪ್ರಕರಣ: ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿ ಬಂದ್, ಪ್ರತಿಭಟನೆ (Video)

ಕೋಟ ಅವಳಿ ಕೊಲೆ ಪ್ರಕರಣದ ಆರೋಪಿಗಳ ಬಂಧನ? ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ ಅಂತೆಕಂತೆ!

ಕೋಟ ಡಬ್ಬಲ್ ಮರ್ಡರ್ ಕೇಸ್: ಇಬ್ಬರು ಆರೋಪಿಗಳ ಬಂಧನ

ಕೋಟ ಸ್ನೇಹಿತರ ಕೊಲೆಗೆ ಜಿ.ಪಂ ಸದಸ್ಯನೇ ಸೂತ್ರಧಾರಿ; ಪೊಲೀಸರಿಂದ 6 ಮಂದಿ ಬಂಧನ

ಕೋಟ ಅವಳಿ ಕೊಲೆಯ ಆರು ಆರೋಪಿಗಳಿಗೆ ಫೆ.15ರವರೆಗೆ ಪೊಲೀಸ್ ಕಸ್ಟಡಿ, ಮುಂದುವರಿಯಲಿದೆ ತನಿಖೆ

Comments are closed.