ಕರಾವಳಿ

ನಗರದ ಪ್ರತ್ಯೇಕ ಸ್ಥಳಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರ ಬಂಧನ

Pinterest LinkedIn Tumblr

ಮಂಗಳೂರು : ನಗರದ ಪ್ರತ್ಯೇಕ ಸ್ಥಳಗಳಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ನಗರದ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆ ಮತ್ತು ಸಿಸಿಬಿ ಘಟಕದ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿರುತ್ತಾರೆ.

ಬಂಧಿತ ಆರೋಪಿಗಳನ್ನು ವೆಲೆನ್ಸಿಯಾ ಉಜ್ಜೋಡಿಯ ಪ್ರೀತಂ .ಜೆ (31) ಹಾಗೂ ಪಂಜಿಮೊಗರು ನಿವಾಸಿ ಸನತ್ ರಾವ್ (22) ಎಂದು ಗುರುತಿಸಲಾಗಿದೆ.

ಮಂಗಳೂರು ನಗರದ ವೆಲೆನ್ಸಿಯಾ ವೃತ್ತದ ಬಳಿಯಿರುವ ಸ್ಟೇಟ್ ಬ್ಯಾಂಕ್ ಸಮೀಪ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ರೀತಂ ಅನ್ನು ಮಂಗಳೂರು ನಗರದ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆ ಮತ್ತು ಸಿಸಿಬಿ ಘಟಕದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಆರೋಪಿ ವಶದಿಂದ ಸುಮಾರು 260 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಮತ್ತು ಮೊಬೈಲ್ ಪೋನನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿದ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ ರೂ.90220/ ಎಂದು ಪೊಲೀಸರು ತಿಳಿಸಿದ್ದಾರೆ.

ಮೇಲಾಧಿಕಾರಿಗಳ ಮಾರ್ಗದರ್ಶನದಂತೆ ಎಕಾನಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಾಮಕೃಷ್ಣ ಕೆ.ಕೆ., ಮತ್ತು ಸಿಬ್ಬಂದಿಗಳು ಹಾಗೂ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶಾಂತರಾಮ ಮತ್ತು ಉಪ- ನಿರೀಕ್ಷಕರಾದ ಕಬ್ಬಾಳ್ ರಾಜ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿರುತ್ತಾರೆ.

ಗಾಂಜಾ ಮಾರಾಟ : ಮತ್ತೋರ್ವನ ಬಂಧನ

ಮತ್ತೊಂದು ಪ್ರಕರಣದಲ್ಲಿ ಮಂಗಳೂರು ನಗರದ ಪಂಜಿಮೊಗರು ವಿವೇಕನಗರ ಸಾರ್ವಜನಿಕ ರಸ್ತೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಪಂಜಿಮೊಗರು ನಿವಾಸಿ ಸನತ್ ರಾವ್ ಎಂಬಾತನನ್ನು ಮಂಗಳೂರು ನಗರದ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣಾ ನಿರೀಕ್ಷಕರು ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿರುತ್ತಾರೆ.

ಆರೋಪಿತನಿಂದ ಸುಮಾರು 104 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ವನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿದ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ ರೂಪಾಯಿ 35250 ಆಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಇಕನಾಮಿಕ್ & ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಹಾಗೂ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.

Comments are closed.