ಕರಾವಳಿ

ಹುತಾತ್ಮ ಯೋಧರ ಆತ್ಮಗಳಿಗೆ ಚಿರಶಾಂತಿ ಕೋರಿ ಶಾಸಕ ಕಾಮತ್ ಪ್ರಾರ್ಥನೆ

Pinterest LinkedIn Tumblr

ಮಂಗಳೂರು : ಜಮ್ಮು ಕಾಶ್ಮೀರದಲ್ಲಿ ಶ್ರೀನಗರದ ಪುಲ್ವಾಮಾ ಪ್ರದೇಶದಲ್ಲಿ ಗುರುವಾರ ಪಾಕಿಸ್ತಾನದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ 40ಕ್ಕೂ ಹೆಚ್ಚು ಯೋಧರ ಆತ್ಮಗಳಿಗೆ ಚಿರಶಾಂತಿ ಸಿಗಲಿ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಪ್ರಾರ್ಥಿಸಿದ್ದಾರೆ.

ಶಾಸಕ ಡಿ ವೇದವ್ಯಾಸ ಕಾಮತ್

ಈಗಾಗಲೇ ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಉನ್ನತ ಸ್ಥರದ ಭದ್ರತಾ ಅಧಿಕಾರಿಗಳ ಸಭೆ ಕರೆದು ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ನೇತೃತ್ವದಲ್ಲಿ ಪ್ರತ್ಯುತ್ತರ ಕೊಡುವ ಬಗ್ಗೆ ಯೋಜನೆ ಹಾಕಲಾಗಿದೆ. ಆದಷ್ಟು ಶೀಘ್ರದಲ್ಲಿ ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ನೀಡಲಾಗುತ್ತದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

Comments are closed.