ಕರಾವಳಿ

ಸಂಸದರ ನಿಧಿಯಿಂದ ನೂಜಿ-ಅಳಪೆ ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕ ಕಾಮತ್ ಗುದ್ದಲಿಪೂಜೆ

Pinterest LinkedIn Tumblr

ಮಂಗಳೂರು ಮಹಾನಗರ ಪಾಲಿಕೆಯ 51 ನೇ ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್  ಗುದ್ದಲಿ ಪೂಜೆ ನೆರವೇರಿಸಿದರು.

ನಂತರ ಈ ಬಗ್ಗೆ ಮಾತನಾಡಿದ ಶಾಸಕ ಕಾಮತ್ ಅವರು, ದಕ್ಷಿಣ ಕನ್ನಡ ಲೋಕಸಭಾ ಸದಸ್ಯರ ನಿಧಿಯಿಂದ ಐದು ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ. ಪಾಲಿಕೆಯ 51 ನೇ ವಾರ್ಡಿನ ನೂಜಿ ರಸ್ತೆಯ ಕಾಂಕ್ರೀಟಿಕರಣದಿಂದ ನೂಜಿ-ಅಳಪೆ ಪರಿಸರದ ನಾಗರಿಕರಿಗೆ ಬಹಳಷ್ಟು ಅನುಕೂಲಕರವಾಗಲಿದೆ ಎಂದು ತಿಳಿಸಿದರು.

ಈಗಾಗಲೇ ಲೋಕೋಪಯೋಗಿ ಇಲಾಖೆಯೊಂದಿಗೆ ಮಾತನಾಡಿದ್ದು ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಬಿಡುಗಡೆಯಾದರೆ ಈ ಭಾಗದಲ್ಲಿ ಇನ್ನಷ್ಟು ಪ್ರಮಾಣದಲ್ಲಿ ರಸ್ತೆಗಳಿಗೆ ಕಾಂಕ್ರೀಟಿಕರಣ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಳಪೆ ವಾರ್ಡ್ ಉತ್ತರದಲ್ಲಿ ಇರುವ ಇನ್ನಷ್ಟು ರಸ್ತೆಗಳನ್ನು ಬರುವ ದಿನಗಳಲ್ಲಿ ಸಂಸದರ ನಿಧಿ, ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಪಾಲಿಕೆ ಸದಸ್ಯರ ನಿಧಿ ಬಳಸಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಕಾಮತ್ ತಿಳಿಸಿದರು.

ಶಾಸಕರೊಂದಿಗೆ ಸ್ಥಳೀಯ ಮನಪಾ ಸದಸ್ಯ ಬಿ ಪ್ರಕಾಶ್, ಬಿಜೆಪಿ ಮುಖಂಡರಾದ ವಸಂತ ಜೆ ಪೂಜಾರಿ, ವಾರ್ಡ್ ಅಧ್ಯಕ್ಷ ನರೇಶ್, ಪ್ರಧಾನ ಕಾರ್ಯದರ್ಶಿ ಪ್ರವೀಣ್, ಗೀತಾ ಶೆಟ್ಟಿ, ಚರಿತ್ ಪೂಜಾರಿ, ಸ್ಥಳೀಯರಾದ ಲಕ್ಷ್ಮಿ, ಎಲ್ಲಪ್ಪ ಕರ್ಕೇರ, ದಿನೇಶ್, ಸುರೇಶ್ ಆಚಾರ್, ಮಾಧವ, ನಾಗಮ್ಮ, ಗಾಯತ್ರಿ ಮತ್ತಿತ್ತರರು ಉಪಸ್ಥಿತರಿದ್ದರು.

Comments are closed.