ಕರಾವಳಿ

ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಮತಗಟ್ಟೆಗಳಿಗೆ ಡಿ.ಸಿ. ಭೇಟಿ

Pinterest LinkedIn Tumblr

ಉಡುಪಿ: ಜಿಲ್ಲಾಧಿಕಾರಿ ಹಪ್ಸಿಬಾ ರಾಣಿ ಕೊರ್ಲಪಾಟಿ ಅವರು, ಸಹಾಯಕ ಕಮೀಷನರು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿ ಹಾಗೂ ಬಿಎಲ್ಓ ರವರೊಂದಿಗೆ ಕುಂದಾಪುರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಮತಗಟ್ಟೆಗಳಿಗೆ ಭೇತಿ ನೀದಿದರು.

ಕುಂದಾಪುರ ಜೂನಿಯರ್ ಕಾಲೇಜಿನ ಮತಗಟ್ಟೆ ಸಂಖ್ಯೆ 9, 10, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ- ಹೆಮ್ಮಾಡಿ, ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 180, 181 ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ- ಉಪ್ಪಿನಕುದ್ರುಗೆ ಭೇಟಿ ನೀಡಿ ಮತಗಟ್ಟೆಯಲ್ಲಿನ ಮೂಲ ಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್, ರ್ಯಾಂಪ್, ಶೌಚಾಲಯ ಇವುಗಳ ಇರುವಿಕೆಯ ಬಗ್ಗೆ ಪರಿಶೀಲನೆ ನಡೆಸಲಾಯಿತು. ಅಲ್ಲದೇ ಮಿಂಚಿನ ನೊಂದಣಿ ಬಗ್ಗೆ ಸೂಕ್ತವಾದ ಬ್ಯಾನರ್ಗಳನ್ನು ಅಳವಡಿಸಿ ಪ್ರಚಾರ ಕೈಗೊಳ್ಳುವಂತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರನ್ನು ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸೂಚನೆ ನೀಡಲಾಯಿತು.

Comments are closed.