ಕರಾವಳಿ

ಅಬ್ಬಕ್ಕ ಉತ್ಸವ 2019 : ವಿವಿಧ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಿದ್ಧತೆ

Pinterest LinkedIn Tumblr

ಮಂಗಳೂರು: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದ.ಕ. ಜಿಲ್ಲಾ ಮಟ್ಟದ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಆಶ್ರಯದಲ್ಲಿ ಮಾರ್ಚ್ 2-3,2019 ರಂದು ಉಳ್ಳಾಲ ಕಡಲ ಕಿನಾರೆಯಲ್ಲಿ ಜರಗುವ ‘ವೀರರಾಣಿ ಅಬ್ಬಕ್ಕ ಉತ್ಸವ – 2019’ ಸಲುವಾಗಿ ವಿವಿಧ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಯೋಜಿಸಲು ಸಿದ್ಧತೆ ನಡೆಸಲಾಗಿದೆ.

ಉತ್ಸವದ ಎರಡನೇ ದಿನ ರಾಣಿ ಅಬ್ಬಕ್ಕನ ಸ್ವಾತಂತ್ರ್ಯ ಹೋರಾಟದ ಇತಿಹಾಸಕ್ಕೆ ಸಂಬಂಧಿಸಿದಂತೆ ನಾಡಿನ ಹೆಸರಾಂತ ವಿದ್ವಾಂಸರನ್ನು ಕರೆಸಿ ಉನ್ನತ ಮಟ್ಟದ ವಿಚಾರ ಸಂಕಿರಣ ನಡೆಸಲಾಗುವುದು. ಅಲ್ಲದೆ ಆಯ್ದ ಕವಿಗಳಿಂದ ಕನ್ನಡ, ತುಳು, ಕೊಂಕಣಿ, ಬ್ಯಾರಿ,ಅರೆಭಾಷೆ, ಕುಂದಾಪ್ರ ಕನ್ನಡಗಳನ್ನೊಳಗೊಂಡ ಬಹುಭಾಷಾ ಕವಿಗೋಷ್ಠಿಯನ್ನೂ ಆಯೋಜಿಸಲಾಗುವುದು.

ಅಬ್ಬಕ್ಕ ಉತ್ಸವದ ನೋಡಲ್ ಅಧಿಕಾರಿಯಾಗಿರುವ ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಆರ್. ಅವರ ಅಧ್ಯಕ್ಷತೆಯಲ್ಲಿ ಈಚೆಗೆ ಜರಗಿದ ಉತ್ಸವದ ಉಪಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಯಿತು.

ಸಮಿತಿ ಸದಸ್ಯರಾದ ಪ್ರೊ. ಎ.ವಿ.ನಾವಡ, ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ, ಸುವಾಸಿನಿ ಬಬ್ಬುಕಟ್ಟೆ, ವಿಜಯಲಕ್ಷ್ಮಿ ಬಿ.ಶೆಟ್ಟಿ, ನಮಿತಾ ಶ್ಯಾಮ್, ದೇವಕಿ ಉಳ್ಳಾಲ, ರಜಿಯಾ ಇಬ್ರಾಹಿಂ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಶಿವರಾಮಯ್ಯ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಉಪಸ್ಥಿತರಿದ್ದರು.

ನಾಡಿನ ಇಬ್ಬರು ಹಿರಿಯ ಮಹಿಳಾ ಸಾಧಕಿಯರನ್ನು ಆಯ್ದು ಸಾಹಿತ್ಯ ಮತ್ತು ಸಾಹಿತ್ಯೇತರ ವಿಭಾಗಗಳಲ್ಲಿ ಎರಡು ವೀರರಾಣಿ ಅಬ್ಬಕ್ಕ ಪ್ರಶಸ್ತಿಗಳನ್ನು ನೀಡುವ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

Comments are closed.