ಕರಾವಳಿ

ದರೋಡೆಗೆ ಸಂಚು : ಉಳ್ಳಾಲ ಪೊಲೀಸರಿಂದ ಐವರ ಬಂಧನ

Pinterest LinkedIn Tumblr

ಮಂಗಳೂರು, ಫೆಬ್ರವರಿ. 28: ಉಳ್ಳಾಲ ಪೊಲೀಸರು ನಡೆಸಿದ ಕಾರ್ಯಾಚರಣೆಯೊಂದರಲ್ಲಿ ದರೋಡೆ ನಡೆಸಲು ಸಂಚು ರೂಪಿಸಿದ್ದ ಐವರು ಅಂತರ್ ರಾಜ್ಯ ಆರೋಪಿಗಳನ್ನು ಬಂಧಿಸಿ, ಮಾರಕಾಯುಧಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಕೇರಳದ ತ್ರಿಶ್ಯೂರ್ ನಿವಾಸಿಗಳಾದ ಸುಜಿತ್ ಜಿ. (24), ಮುಹಮ್ಮದ್ ಫಾಝಿಲ್ (24), ಮುಹಮ್ಮದ್ ಶರೀಫ್ (25), ಅನಸ್ (21), ಸಲೀಂ (30) ಎಂದು ಗುರುತಿಸಲಾಗಿದ್ದು, ಆರೋಪಿಗಳು ವಾಹನಗಳಿಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿ ದರೋಡೆ ನಡೆಸಲು ಸಂಚು ರೂಪಿಸುತ್ತಿದ್ದರು ಎನ್ನಲಾಗಿದೆ.

ಉಳ್ಳಾಲ ಠಾಣೆ ವ್ಯಾಪ್ತಿಯ ತಲಪಾಡಿ ಬಳಿ ಚೂರಿ, ರಾಡ್, ದೊಣ್ಣೆ, ಗಮ್ ಟ್ಯಾಪರ್ ರೋಲ್‌ಗಳನ್ನು ಇಟ್ಟುಕೊಂಡು ಕಾರಿಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿ ದರೋಡೆ ನಡೆಸಲು ಆರೋಪಿಗಳು ಸಂಚು ರೂಪಿಸಿದ್ದರು. ಆರೋಪಿಗಳು ಶೋಕಿ ಜೀವನ ನಡೆಸಲು ಕೃತ್ಯ ನಡೆಸುತ್ತಿದ್ದಾರೆ. ಕೃತ್ಯ ನಡೆಸಲು ಬಳಸಿದ ಕಾರಿಗೆ ಅದರ ಮೂಲ ನೋಂದಣಿ ನಂಬರ್ ಬದಲಾಗಿ ನಕಲಿ ನಂಬರ್‌ನ್ನು ಅಳವಡಿಸಿದ್ದರು. ಬಂಧಿತರಿಂದ ನಾಲ್ಕು ಲಕ್ಷ ರೂ. ಮೌಲ್ಯದ ಸೊತ್ತನ್ನು ವಶಕ್ಕೆ ಪಡೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಮಂಗಳೂರು ದಕ್ಷಿಣ ವಿಭಾಗದ ಎಸಿಪಿ, ದಕ್ಷಿಣ ಉಪ ವಿಭಾಗದ ರೌಡಿ ನಿಗ್ರಹದಳದ ತಂಡ ಹಾಗೂ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Comments are closed.