ಕರಾವಳಿ

ಇಮ್ತಿಯಾಝ್ ಶಾ ತುಂಬೆ ಇವರಿಗೆ ಪ.ಗೋ ಪ್ರಶಸ್ತಿ ಪ್ರದಾನ

Pinterest LinkedIn Tumblr

ಮಂಗಳೂರು : ದ.ಕ. ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರಸಕ್ತ ಸಾಲಿನ ಪ್ರತಿಷ್ಠಿತ ಪ.ಗೋ. ಪ್ರಶಸ್ತಿ ಪ್ರದಾನ ಸಮಾರಂಭ ಬುಧವಾರ ನಗರದ ಪ್ರೆಸ್ ಕ್ಲಬ್‌ನಲ್ಲಿ ನಡೆಯಿತು.

‘ವಾರ್ತಾಭಾರತಿ’ ಕನ್ನಡ ದೈನಿಕದ ಉಪಸಂಪಾದಕ ಇಮ್ತಿಯಾಝ್ ಶಾ ತುಂಬೆ ಅವರಿಗೆ ದ.ಕ. ಜಿಲ್ಲಾ ವಾರ್ತಾಧಿಕಾರಿ ಕೆ. ರೋಹಿಣಿಯವರು ಪ.ಗೋ ಪ್ರಶಸ್ತಿ ಪ್ರದಾನ ಮಾಡಿದರು. ಕಳೆದ ವರ್ಷ ಭಾರೀ ಮಳೆ, ಭೂಕುಸಿತದಿಂದ ತತ್ತರಿಸಿದ್ದ ಕೊಡಗಿನ ಪುನರ್ ನಿರ್ಮಾಣಕ್ಕೆ ಪೂರಕವಾಗಿ 2018ರ ಆಗಸ್ಟ್ 31ರಂದು ವಾರ್ತಾಭಾರತಿ ದಿನ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ಇಮ್ತಿಯಾಝ್ ಶಾ ಅವರ ‘ಕೊಡುವ ಕೈಗಳಿಗಾಗಿ ಕಾಯುತ್ತಿರುವ ಕೊಡಗು’ ವಿಶೇಷ ವರದಿಗೆ ಪ.ಗೋ. ಪ್ರಶಸ್ತಿಗೆ ಪಾತ್ರವಾಗಿದೆ.

ಕಾರ್ಯಕ್ರಮದಲ್ಲಿ ದಿ. ಪದ್ಯಾಣ ಗೋಪಾಲಕೃಷ್ಣರ ಪತ್ನಿ ಸಾವಿತ್ರಿ, ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ, ಕಾರ್ಯದರ್ಶಿ ಪುಷ್ಪರಾಜ್ ಬಿ.ಎನ್., ಪ್ರೆಸ್‌ಕ್ಲಬ್ನ ಅನ್ನು ಮಂಗಳೂರು, ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್, ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ, ಪದಾಧಿಕಾರಿಗಳಾದ ಸತ್ಯಾ ಕೆ., ಭಾಸ್ಕರ ರೈ ಕಟ್ಟ ಮೊದಲಾದವರು ಉಪಸ್ಥಿತರಿದ್ದರು.
ಆರ್.ಸಿ.ಭಟ್ ಸ್ವಾಗತಿಸಿದರು. ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಎ.ಆರ್.ಲೋಹಾನಿ ವಂದಿಸಿದರು.

Comments are closed.