ಕರಾವಳಿ

ಚುನಾವಣೆಯಲ್ಲಿ ಅಕ್ರಮ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲು ಡಿಸಿ ಖಡಕ್ ಸೂಚನೆ

Pinterest LinkedIn Tumblr

ಉಡುಪಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಅಭ್ಯರ್ಥಿಗಳಿಂದ ಮತದಾರರ ಮೇಲೆ ಪ್ರಭಾವ ಬೀರುವ ಅಕ್ರಮಗಳು ಕಂಡು ಬಂದಲ್ಲಿ ಅಂತಹ ಪ್ರಕರಣಗಳಲ್ಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ , ಲೋಕಸಭಾ ಚುನಾವಣೆ ಪ್ರಯುಕ್ತ ಕರ್ತವ್ಯಕ್ಕೆ ನಿಯೋಜಿಸಲಗಿರುವ ವಿವಿಧ ಹಂತದ ಅಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪಾರದರ್ಶಕ, ಮುಕ್ತ, ನ್ಯಾಯ ಸಮ್ಮತ ರೀತಿಯಲ್ಲಿ ಹಾಗೂ ಮತದಾರರು ಯಾವುದೇ ಪ್ರಲೋಬನೆಗೆ ಒಳಗಾಗದೇ ಮತ ಚಲಾಯಿಸಬೇಕೆಂಬುದು ಪ್ರಜಾಪ್ರಭುತ್ವದ ಆಶಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಅಧಿಕರಿಗಳು ತಮಗೆ ನಿಗಧಿಪಡಿಸಿರುವ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ತಿಳಿಸಿದರು.

ಚುನಾವಣೆ ಘೋಷಣೆಯಾದ ತಕ್ಷಣವೇ ಮಾದರಿ ನೀತಿ ಸಂಹಿತೆ ಬರಲಿದ್ದು, ನಂತರದ 24 ಗಂಟೆಯೊಳಗೆ ಸಾರ್ವಜನಿಕ ಸ್ಥಳಗಳಲ್ಲಿರುವ ಎಲ್ಲಾ ಪ್ರಕಾರದ ಪ್ರಚಾರದ ವಸ್ತುಗಳನ್ನು ತೆರವುಗೊಳಿಸಬೇಕು, ಅಲ್ಲದೇ ಸಾರ್ವಜನಿಕರು ತಮ್ಮ ಮನೆಗಳ ಮುಂದೆ ಯಾವುದೇ ರಾಜಕೀಯ ಪಕ್ಷಗಳ ಬ್ಯಾನರ್, ಧ್ವಜ ಅಳವಡಿಸಿದರೂ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಷಾ ಜೇಮ್ಸ್ ಮಾತನಾಡಿ, ಯಾವುದೇ ಅಕ್ರಮ ಚಟುವಟಿಕೆ ಕಂಡುಬಂದಲ್ಲಿ ವಿಳಂಬ ಮಾಡದೇ ಕಸೆಸು ದಾಖಲಿಸಬೇಕು, ಸಮಪ್ಕ ದಾಖಲೆಗಳಿಲ್ಲದ 50 ಕ್ಕೂ ಸಾವಿರಕ್ಕೂ ಮಿಕ್ಕಿದ ನಗದು ಕೊಂಡೊಯ್ಯುವಂತಿಲ್ಲ, ಎಲ್ಲಾ ಇಲಾಖೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಮಾತನಾಡಿ, ಚುನಾವಣಾ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ ಹಿಂಜರಿಕೆ ಇಲ್ಲದೇ ತಮ್ಮ ಕರ್ತವ್ಯ ನಿರ್ವಹಿಸಬೇಕು, ಚುನಾವಣಾ ಕರ್ತವ್ಯ ಲೋಪವಾದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಚುನಾವಣಾ ಆಯೋಗ ಸಿದ್ದಪಡಿಸಿರುವ ವಿವಿಧ ಆಪ್ ಗಳನ್ನು ಚುನಾವಣೆ ಸಮಯದಲ್ಲಿ ಬಳಸುವ ಬಗ್ಗೆ ಮತ್ತು ವಿವಿಧ ಸಮಿತಿಗಳು ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತಂತೆ,ನುರಿತ ತರಬೇತುದಾರರಿಂದ ಎಲ್ಲಾ ಅಧಿಕಾರಿಗಳಿಗೆ ಸಮಗ್ರ ಮಾಹಿತಿ ಮತ್ತು ತರಬೇತಿ ನೀಡಲಾಯಿತು.

Comments are closed.