ಕರಾವಳಿ

ಮುಖ್ಯಮಂತ್ರಿಗಳು ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿಯಬಾರದು : ಇಂಜಿನಿಯರಿಂಗ್ ಶುಲ್ಕ ಹೆಚ್ಚಳಕ್ಕೆ ಶಾಸಕ ಕಾಮತ್ ವಿರೋಧ

Pinterest LinkedIn Tumblr

ಮಂಗಳೂರು : ರಾಜ್ಯದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಈ ವರ್ಷದಿಂದ ಶುಲ್ಕ ಹೆಚ್ಚಿಸಿರುವ ರಾಜ್ಯ ಸರಕಾರದ ಕ್ರಮವನ್ನು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾ ಸ ಕಾಮತ್ ವಿರೋಧಿಸಿದ್ದಾರೆ.

ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ಒತ್ತಾಯ ಮಾಡುತ್ತಿವೆ ಎಂದ ತಕ್ಷಣ ಅವುಗಳ ತಾಳಕ್ಕೆ ತಕ್ಕಂತೆ ಕುಣಿಯುವುದು ರಾಜ್ಯದ ಮುಖ್ಯಮಂತ್ರಿಗಳಿಗೆ ಶೋಭೆ ತರುವುದಿಲ್ಲ. ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ಹೆಚ್ಚಳ ಬರೆ ಹಾಕಿದಂತೆ. ಅಂತಹ ಮಕ್ಕಳ ಭವಿಷ್ಯದ ಅಭಿವೃದ್ಧಿಗಾಗಿ ಕುಮಾರಸ್ವಾಮಿಯವರು ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿಯಬಾರದು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.

Comments are closed.