ಕರಾವಳಿ

ಮಣಿಪಾಲದ ಬಳಿ ಅಪ್ರಾಪ್ತೆಯ ಶವ ಪತ್ತೆ: ಅತ್ಯಾಚಾರ ನಡೆಸಿ ಕೊಲೆಗೈದ ಶಂಕೆ

Pinterest LinkedIn Tumblr

ಉಡುಪಿ: ಮಣಿಪಾಲದಿಂದ ಸುಮಾರು ಒಂದೂವರೆ ಕಿ.ಮೀ. ದೂರದಲ್ಲಿರುವ ಸಗ್ರಿಯ ನಿರ್ಜನ ಪ್ರದೇಶದಲ್ಲಿ ರೈಲು ಹಳಿ ಪಕ್ಕದ ಹಾಡಿಯಲ್ಲಿ ರವಿವಾರ ಸಂಜೆ ಅಪ್ರಾಪ್ತ ಯುವತಿಯೋರ್ವಳ ಶವ ಪತ್ತೆಯಾಗಿದ್ದು, ಕೊಲೆ ಪ್ರಕರಣ ದಾಖಲಾಗಿದೆ.

ಮೈಮೇಲಿನ ಬಟ್ಟೆಗಳು ಅಸ್ತವ್ಯಸ್ತವಾಗಿರುವ ಕಾರಣ ಅತ್ಯಾಚಾರ ನಡೆಸಿ ಕೊಲೆಗೈಯಲಾಗಿದೆ ಎಂದು ಶಂಕಿಸಲಾಗಿದೆ.

ಬೇರೆ ಜಿಲ್ಲೆಯಿಂದ ಉಡುಪಿಗೆ ಬಂದು ಇಲ್ಲಿ ಕೆಲಸ ಮಾಡಿಕೊಂಡಿದ್ದ ವಲಸೆ ಕಾರ್ಮಿಕ ಕುಟುಂಬದ ಅಪ್ರಾಪ್ತ ಯುವತಿ ಎಂದು ಹೇಳಲಾಗಿದೆ. ಸ್ಥಳಕ್ಕೆ ಎಸ್‌ಪಿ ನಿಶಾ ಜೇಮ್ಸ್‌, ಹಾಗೂ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರೆಸಿದ್ದಾರೆ.

Comments are closed.