ಮಂಗಳೂರು, ಮಾರ್ಚ್. 11: ದ.ಕ. ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ರವಿವಾರ ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಕ್ಕಳಿಗೆ ಲಸಿಕೆ ಹಾಕುವುದರ ಮೂಲಕ ಸಚಿವ ಯು.ಟಿ. ಖಾದರ್ ಅವರು ಚಾಲನೆ ನೀಡಿದರು.
ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮಕೃಷ್ಣರಾವ್, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ರಾಜೇಶ್ ಬಿ.ವಿ., ಲೇಡಿಗೋಶನ್ ವೈದ್ಯಾಧಿಕಾರಿ ಡಾ. ಸವಿತಾ, ವೆನ್ಲಾಕ್ ಆಸ್ಪತ್ರೆಯ ಆರ್ ಎಂ ಓ ಡಾ. ಸಲ್ದಾನ, ವೆನ್ಲಾಕ್ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಬಾಲಕೃಷ್ಣ ಅವರು ಉಪಸ್ಥಿತರಿದ್ದರು.
Comments are closed.