ಕರಾವಳಿ

ಪೊಳಲಿ ಶ್ರೀ ಕ್ಷೇತ್ರದ ದೇವಳದ ವೈಭವ, ಮರದ ಕೆತ್ತನೆಗಳ ಬಗ್ಗೆ ಸಿದ್ದರಾಮಯ್ಯ ಮೆಚ್ಚುಗೆ

Pinterest LinkedIn Tumblr

ಮಂಗಳೂರು, ಮಾರ್ಚ್. 11: ಲೋಕಸಭಾ ಚುನಾವಣೆ ಸಮೀಸುತ್ತಿದ್ದಂತೆ ರಾಜಕಾರಣಿಗಳ ಕ್ಷೇತ್ರಗಳ ಭೇಟಿ ಹೆಚ್ಚಾಗುತ್ತಿದ್ದು, ಸಾಲು ಸಾಲು ಜನಪ್ರತಿನಿಧಿಗಳು ಆಗಮಿಸುತ್ತಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳಕ್ಕೆ ರವಿವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದರು.

ಬ್ರಹ್ಮಕಲಶೋತ್ಸವ ನಡೆಯುತ್ತಿರುವ ಶುಭ ಸಂದರ್ಭದಲ್ಲಿ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಜತೆ ಆಗಮಿಸಿದ ಸಿದ್ದರಾಮಯ್ಯ ಅವರು ದೇವರ ದರ್ಶನ ಪಡೆದರು.

ದೇವಳದ ಅನುವಂಶಿಕ ಆಡಳಿತ ಮೊಕ್ತೇಸರರಾದ ಅಮ್ಮುಂಜೆಗುತ್ತು ಡಾ. ಮಂಜಯ್ಯ ಶೆಟ್ಟಿ, ಮೊಕ್ತೇಸರರಾದ ತಾರನಾಥ ಆಳ್ವ ಉಳಿಪಾಡಿಗುತ್ತು, ಬ್ರಹ್ಮಕಲಶ ಸಮಿತಿ ಅಧ್ಯಕ್ಷ, ಶಾಸಕ ಯು.ರಾಜೇಶ್ ನಾಯ್ಕ್, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ರಮಾನಾಥ ರೈ, ಕೃಷ್ಣಕುಮಾರ್ ಪೂಂಜಾ ಫರಂಗಿಪೇಟೆ, ಮಾಜಿ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರನ್ನು ಸ್ವಾಗತಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಎಂಎಲ್ ಸಿ ಹರೀಶ್ ಕುಮಾರ್, ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಕೃಪಾ ಆಳ್ವ, ಮನಪಾ ಸದಸ್ಯ ಪ್ರವೀಣ್ ಆಳ್ವ ಮುಂತಾದವರು ಈ ವೇಳೆ ಉಪಸ್ಥಿತರಿದ್ದರು.

ಅರ್ಚಕರು ಪ್ರಾರ್ಥಿಸಿ ಪ್ರಸಾದವಿತ್ತರು. ಶಾಸಕ ಯು. ರಾಜೇಶ್ ನಾಯ್ಕ್ ಅವರು ದೇವಳದ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಇವರಿಗೆ ದೇವಳದ ಇತಿಹಾಸವನ್ನು ವಿವರಿಸಲಾಯಿತು. ಉಗ್ರಾಣ, ದೇವಳದ ವೈಭವ, ಮರದ ಕೆತ್ತನೆಯನ್ನು ವೀಕ್ಷಿಸಿದ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

Comments are closed.