ಕುಂದಾಪುರ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಜೆಡಿಎಸ್ ಅಭ್ಯರ್ಥಿಗೆ ಟಿಕೆಟ್ ನೀಡುವುದನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಟಯರ್ ಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆಗೆ ವಿರೋಧಿಸಿದ ಕಾರ್ಯಕರ್ತರು ಚಿಕ್ಕಮಗಳೂರು ಇಂದಿರಾಗಾಂಧಿಗೆ ಮರುಜನ್ಮ ಕೊಟ್ಟ ಕ್ಷೇತ್ರವಾಗಿದ್ದು, ಆಸ್ಕರ್ ಫೆರ್ನಾಂಡೀಸ್ ಸತತವಾಗಿ ಗೆದ್ದ ಕ್ಷೇತ್ರವಾಗಿದೆ. ಮೈತ್ರಿ ನಿರ್ಧಾರದಿಂದ ಕಾಂಗ್ರೆಸ್ ಪಕ್ಷಕ್ಕೆ ಅವಮಾನವಾಗಿದೆ ಎಂದು ಕೈ ಕಾರ್ಯಕರ್ತರು ಆಕ್ರೋಷ ವ್ಯಕ್ತಪಡಿಸಿದರು ಮಾತ್ರವಲ್ಲದೇ ನಿರ್ಧಾರ ಮರುಪರಿಶೀಲಿಸಲು ಯುವ ಕಾರ್ಯಕರ್ತರು ಆಗ್ರಹಿಸಿ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಸುವಂತೆ ವರಿಷ್ಠರಿಗೆ ಮನವಿ ಸಲ್ಲಿಸಿದರು.
Comments are closed.