ಕರಾವಳಿ

ಮಂಗಳೂರಿನ ಪ್ರತಿಭಾ ಕುಳಾಯಿಗೆ ಉಡುಪಿ ಕ್ಷೇತ್ರಕ್ಕೆ ಕೆಪಿಸಿಸಿಯಿಂದ ಉಸ್ತುವಾರಿ ಹುದ್ದೆ

Pinterest LinkedIn Tumblr

ಮಂಗಳೂರು : ಮುಂಬರುವ ಲೋಕಸಭಾ ಚುನಾವಣೆ ಹಾಗೂ ಪಕ್ಷ ಸಂಘಟನೆ ಬಲವರ್ಧನೆಯ ಹಿನ್ನಲೆಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಸಮಿತಿಯ ಮಾಜೀ ಕಾರ್ಯದರ್ಶಿ ಹಾಗೂ ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಉಡುಪಿ ವಿಧಾನ ಸಭಾ ಕ್ಷೇತ್ರಕ್ಕೆ ಕೆಪಿಸಿಸಿ ವತಿಯಿಂದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ದಿನೇಶ್ ಗೂಂಡೂರಾವ್ ಅವರು ಪ್ರತಿಭಾ ಕುಳಾಯಿ ಅವರನ್ನು ಉಡುಪಿ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.

ಕೆಪಿಸಿಸಿ ನೀಡಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುವಂತೆಯೂ, ಹೆಚ್ಚಿನ ಸಮಯವನ್ನು ಉಡುಪಿ ವಿಧಾನ ಸಭಾ ಕ್ಷೇತ್ರಕ್ಕೆ ಮೀಸಲಿಟ್ಟು ಕೆಲಸ ಮಾಡುವಂತೆ ಆದೇಶಿಸಲಾಗಿದೆ. ಉಡುಪಿ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಮುಖಂಡರ ಸಹಕಾರ ಪಡೆದು ಪಕ್ಷದ ಸಂಘಟನೆ ಹಾಗೂ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲು ಶಕ್ತಿ ಮೀರಿ ದುಡಿಯುವಂತೆ ಪ್ರತಿಭಾ ಕುಳಾಯಿ ಅವರಿಗೆ ನೀಡಿದ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

Comments are closed.