ಕರಾವಳಿ

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಅಭಾವ; ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಡಿಸಿ ಸೂಚನೆ

Pinterest LinkedIn Tumblr

ಉಡುಪಿ: ಬೇಸಿಗೆ ಹಿನ್ನಲೆಯಲ್ಲಿ ತುರ್ತು ಕುಡಿಯುವ ನೀರು ಪೂರೈಕೆ ಮತ್ತು ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಸಭೆ ನಡೆಯಿತು.

ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆ ಮಾಡುವ ಬಗ್ಗೆ ಪರಿಶೀಲಿಸಿ, ನಿಜವಾದ ಕಡೆಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಟ್ಯಾಂಕರ್ನ ಮೂಲಕ ಕುಡಿಯುವ ನೀರು ಸರಬರಾಜು ಮಾಡುವಂತೆ, ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆಯನ್ನು ವಹಿಸಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸದಂತೆ ನೋಡಿಕೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, 2019- ರ ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವಂತೆ ತಾಲೂಕು ತಹಶೀಲ್ದಾರರು ಮತ್ತು ಕಾರ್ಯನಿರ್ವಹಣಾಧಿಕಾರಿಯವರಿಗೆ ನಿರ್ದೇಶಿಸಿ, ಈ ಬಗ್ಗೆ ತಾಲೂಕು ಮಟ್ಟದ ಸಮಿತಿಯನ್ನು ರಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧು ಬಿ ರೂಪೇಶ್, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉಪಸ್ಥಿತರಿದ್ದರು.

Comments are closed.