ಮಂಗಳೂರು, ಮಾರ್ಚ್.16: ಜಿಲ್ಲಾಧಿಕಾರಿ ಕಚೇರಿಯಲ್ಲಿ ರಚಿಸಲಾಗಿರುವ ಮೀಡಿಯಾ ಮಾನಿಟರಿಂಗ್ ಸೆಲ್ (ಎಂಎಂಸಿ)ಗೆ ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಶನಿವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಕೇಬಲ್ ಚಾನೆಲ್‌ಗಳಲ್ಲಿ ಬರುವ ಕಾರ್ಯಕ್ರಮಗಳು ಹಾಗೂ ಸರ್ಟಿಫಿಕೇಷನ್ ಸಂಬಂಧ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದರು.
ಮಾಧ್ಯಮ ಪ್ರಮಾಣೀಕರಣ ಮತ್ತು ಕಣ್ಗಾವಲು ಸಮಿತಿ ಜಾಹೀರಾತು ಮತ್ತು ಪಾವತಿ ಸುದ್ದಿಗಳು ಬಂದರೆ ನಿಗದಿತ ನಮೂನೆಯಲ್ಲಿ ದಾಖಲಿಸಿ ವೆಚ್ಚ ಪರಿಶೀಲನ ಸಮಿತಿಗೆ ಸಲ್ಲಿಸಲು ನಿರ್ದೇಶನ ನೀಡಿದರು.
Comments are closed.