ಕರಾವಳಿ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ: ಕುಂದಾಪುರಕ್ಕೆ ಎಚ್. ಹರಿಪ್ರಸಾದ್ ಶೆಟ್ಟಿ, ಕೋಟಕ್ಕೆ ಪಿ. ಶಂಭು ಪೂಜಾರಿ

Pinterest LinkedIn Tumblr

ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟ ಬ್ಲಾಕ್ ಮತ್ತು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಆದೇಶ ಮಾಡಿದ್ದಾರೆ.

(ಎಚ್. ಹರಿಪ್ರಸಾದ್ ಶೆಟ್ಟಿ)

(ಪಿ. ಶಂಭು ಪೂಜಾರಿ)

ಕುಂದಾಪುರ ಬ್ಲಾಕ್ ಅಧ್ಯಕ್ಷರಾಗಿ ಎಚ್. ಹರಿಪ್ರಸಾದ್ ಶೆಟ್ಟಿ ಹಾಗೂ ಕೋಟ ಬ್ಲಾಕ್ ಅಧ್ಯಕ್ಷರಾಗಿ ಪಿ. ಶಂಭು ಪೂಜಾರಿ ನೇಮಕ ಮಾಡಲಾಗಿದೆ. ಇಬ್ಬರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಗೊಳಿಸಿದ್ದು ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಆದೇಶಿಸಿದ್ದಾರೆ.

ಈ ಹಿಂದೆ ಕುಂದಾಪುರ ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಯಾಡಿ ಶಿವರಾಮ ಶೆಟ್ಟಿ ಹಾಗೂ ಕೋಟ ಬ್ಲಾಕ್ ಅಧ್ಯಕ್ಷರಾಗಿ ಶಂಕರ ಕುಂದರ್ ಇದ್ದರು.

Comments are closed.