ಕರಾವಳಿ

ಸಹಕಾರಿ ಕ್ಷೇತ್ರದಲ್ಲಿ ನಾನು ಪಕ್ಷ ರಾಜಕೀಯ ಮಾಡಿಲ್ಲ – ಅದಕ್ಕೆ ಗೆಲುವು ಸಾಧಿಸಿದ್ದೇನೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

Pinterest LinkedIn Tumblr

ಮಂಗಳೂರು,ಮಾರ್ಚ್.23: ಅವಿಭಜಿತ ದ.ಕ. ಜಿಲ್ಲಾ ಎಸ್‌ಸಿಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಎಂ.ಎನ್.ರಾಜೇಂದ್ರಕುಮಾರ್ ನೇತೃತ್ವದ ಸಹಕಾರಿ ಕ್ಷೇತ್ರದ ಎಲ್ಲಾ ಅಭ್ಯರ್ಥಿಗಳು ಜಯಗಳಿಸಿರುವುದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಬಳಿಕ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಬಂಧಿಸಿದಂತೆ ದಕ್ಷಿಣ ಮತ್ತು ಉಡುಪಿ ಜಿಲ್ಲೆಗಳ ವ್ಯಾಪ್ತಿಯ 16 ಕ್ಷೇತ್ರಗಳಲ್ಲಿ ಪಕ್ಷಾತೀತವಾಗಿ ಸ್ಪರ್ಧಿಸಿದ ಸಹಕಾರಿ ಕ್ಷೇತ್ರದ ಎಲ್ಲಾ ಅಭ್ಯರ್ಥಿಗಳು ಸಹಕಾರ ಭಾರತಿ ಸಂಘಟನೆಯ ಅಭ್ಯರ್ಥಿಗಳ ವಿರುದ್ಧ ಜಯಗಳಿಸಿರುವುದು ಸಂತಸವನ್ನುಂಟು ಮಾಡಿದೆ” ಎಂದು ಹೇಳಿದರು.

ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ವ್ಯಾಪ್ತಿಯ ಕೇಂದ್ರ ಸಹಕಾರಿ ಬ್ಯಾಂಕ್ 114 ವರ್ಷಗಳ ಇತಿಹಾಸವನ್ನು ಹೊಂದಿದ್ದು ಕಳೆದ 25 ವರ್ಷಗಳ ಕಾಲ ಈ ಬ್ಯಾಂಕ್‌ನ ಅಧ್ಯಕ್ಷನಾಗಿ ಬ್ಯಾಂಕ್‌ನ ಏಳಿಗೆಗೆ ಶ್ರಮಿಸಿದ್ದೇನೆ. ಈ ಹಿನ್ನೆಲೆಯಲ್ಲಿ ‘ಸಹಕಾರಿ ಕ್ಷೇತ್ರದ ‘ಅಭ್ಯರ್ಥಿಗಳಾಗಿ ಸ್ಪರ್ಧಿಸಿದ 16 ಅಭ್ಯರ್ಥಿಗಳು ನನ್ನ ನೇತೃತ್ವದಲ್ಲಿ ಸಹಕಾರ ಭಾರತಿ ಅಭ್ಯರ್ಥಿಗಳ ವಿರುದ್ಧ ಚುನಾವಣೆಯನ್ನು ಎದುರಿಸಿ ಜಯಗಳಿಸಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ನಾನು ಪಕ್ಷ ರಾಜಕೀಯ ಮಾಡಿಲ್ಲ, ಚುನಾವಣೆಯ ನಂತರ ಎಲ್ಲಾ ಸಹಕಾರಿಗಳು ನನಗೆ ಸಮಾನರು ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

Comments are closed.