ಕರಾವಳಿ

ಚುನಾವಣೆಯೆಂಬ ಯುದ್ಧದಲ್ಲಿ ನಮ್ಮದೇ ಗೆಲುವು: ನಾಮಪತ್ರ ಸಲ್ಲಿಸಿ ಶೋಭಾ ಕರಂದ್ಲಾಜೆ ಹೇಳಿಕೆ

Pinterest LinkedIn Tumblr

ಉಡುಪಿ: ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮಾ.26 ಮಂಗಳವಾರದಂದು ಚುನಾವಣಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ 23ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದ್ದು ನರೇಂದ್ರ ಮೋದಿ ಕೈ ಬಲಪಡಿಸಲು ರಾಜ್ಯದ ಜನರು ಬೆಂಬಲಿಸಬೇಕು. ಚುನಾವಣೆ ಒಂದು ಯುದ್ಧವಾಗಿದ್ದು ಈ ಯುದ್ಧವನ್ನು ನಾವು ಸೇನಾನಿಗಳಾಗಿ ಕಾರ್ಯಕರ್ತರ ಹೋರಾಟದೊಂದಿಗೆ ಈ ಯುದ್ಧವನು ಗೆಲ್ಲುತ್ತೇವೆ ಎಂದರು.

ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಕಾರ್ಕಳ ಶಾಸಕ ಸುನಿಲ್ ಕುಮಾರ್, ಕಾಪು ಶಾಸಕ ಲಾಲಾಜಿ ಮೆಂಡನ್, ಉಡುಪಿ ಶಾಸಕ ರಘುಪತಿ ಭಟ್, ಮೂಡಿಗೆರೆ ಶಾಸಕ ಕುಮಾರಸ್ವಾಮಿ, ತರಿಕೆರೆ ಶಾಸಕ ಸುರೇಶ್, ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬಿಜೆಪಿ ಮುಖಂಡರು, ಕಾರ್ಯಕರ್ತರು ಈ ಸಂದರ್ಭ ಉಪಸ್ಥಿತರಿದ್ದರು.

Comments are closed.