ಕರಾವಳಿ

ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಾಳೆ ಮೀಡಿಯಾ ಹೆಲ್ತ್ ಕ್ಲಿನಿಕ್ ಉದ್ಘಾಟನೆ

Pinterest LinkedIn Tumblr

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರಿಗೆ ಹಾಗೂ ಅವರ ಕುಟುಂಬದ ಸದಸ್ಯರ ಅರೋಗ್ಯ ತಪಾಸಣೆಗೆ ಮಂಗಳೂರಿನ ಪತ್ರಿಕಾ ಭವನದಲ್ಲಿ ಎ.ಜೆ. ಆಸ್ಪತ್ರೆಯ ಸಹಯೋಗದೊಂದಿಗೆ ಮೀಡಿಯಾ ಹೆಲ್ತ್ ಕ್ಲಿನಿಕ್ ಆರಂಭಿಸಲಾಗುತ್ತಿದ್ದು, ಇದರ ಉದ್ಘಾಟನೆ ಎಪ್ರಿಲ್ 1ರಂದು ಸೋಮವಾರ 11 ಗಂಟೆಗೆ ನಡೆಯಲಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಎ ಜೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಎ ಜೆ ಶೆಟ್ಟಿ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಕೆ.ಆನಂದ ಶೆಟ್ಟಿ ಭಾಗವಹಿಸಲಿದ್ದಾರೆ. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಅಧ್ಯಕ್ಷತೆ ವಹಿಸಲಿರುವರು.

ಮೇ ತಿಂಗಳಿನಿಂದ ಪ್ರತೀ ತಿಂಗಳ ಎರಡನೇ ಮಂಗಳವಾರ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಅರೋಗ್ಯ ತಪಾಸಣೆ ನಡೆಯಲಿದೆ .ಎ ಜೆ ವೈದ್ಯಕೀಯ ಮಹಾವಿದ್ಯಾಲಯದ ಇಬ್ಬರು ನುರಿತ ವೈದ್ಯರು (ಓರ್ವ ಮಹಿಳಾ ವೈದ್ಯೆ), 3 ಮಂದಿ ಸಿಬ್ಬಂದಿಗಳು ಈ ತಂಡದಲ್ಲಿದ್ದಾರೆ. ಸಕ್ಕರೆ ಕಾಯಿಲೆ, ರಕ್ತದೊತ್ತಡ ಪರೀಕ್ಷೆ ಸೇರಿದಂತೆ ವಿವಿಧ ವೈದ್ಯಕೀಯ ಸೌಲಭ್ಯ ದೊರೆಯಲಿದೆ ಎಂದು ಪ್ರೆಸ್ ಕ್ಲಬ್ ಪ್ರಕಟಣೆ ತಿಳಿಸಿದೆ.

ವೈದ್ಯಕೀಯ ತಪಾಸಣೆಗೆ ಬರುವ ಪತ್ರಕರ್ತರು ಒಂದು ದಿನ ಮುಂಚಿತವಾಗಿ ಹೆಸರನ್ನು ಪ್ರೆಸ್ ಕ್ಲಬ್ ನ ಮ್ಯಾನೇಜರ್ ಅಭಿಷೇಕ್ ಇವರಲ್ಲಿ ನೋಂದಾಯಿಸಿಕೂಳ್ಳಬೇಕಾಗಿದೆ. ಮಂಗಳೂರು ಪ್ರೆಸ್ ಕ್ಲಬ್ ಸಂಪರ್ಕ ಸಂಖ್ಯೆ: 0824-2450111.

Comments are closed.