ಕರಾವಳಿ

ಇಂದು ಸಂಜೆ ಕುಂದಾಪುರಕ್ಕೆ ಸಿಎಂ ಎಚ್‌.ಡಿ. ಕುಮಾರಸ್ವಾಮಿ

Pinterest LinkedIn Tumblr

ಕುಂದಾಪುರ: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಬುಧವಾರ (ಇಂದು) ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು ಸಂಜೆ 5 ಗಂಟೆಗೆ ಕುಂದಾಪುರದ ನೆಹರೂ ಮೈದಾನದಲ್ಲಿ ಆಯೋಜಿಸಲಾಗಿರುವ ಮಹಿಳಾ ಮೀನುಗಾರರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಮಾವೇಶದಲ್ಲಿ ಉಸ್ತುವಾರಿ ಸಚಿವೆ ಡಾ| ಜಯಮಾಲಾ, ವಿಧಾನ ಪರಿಷತ್‌ ಸದಸ್ಯ ಭೋಜೇ ಗೌಡ, ಜೆಡಿಎಸ್‌ ಮುಖಂಡ ವೈ.ಎಸ್‌.ವಿ. ದತ್ತ, ಮಾಜಿ ಸಚಿವರಾದ ವಿನಯಕುಮಾರ್‌ ಸೊರಕೆ, ಅಮರನಾಥ ಶೆಟ್ಟಿ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಗೋಪಾಲ ಭಂಡಾರಿ, ಯು.ಆರ್‌. ಸಭಾಪತಿ, ಕಾಂಗ್ರೆಸ್‌ ಮುಖಂಡ ರಾಕೇಶ್‌ ಮಲ್ಲಿ ಹಾಗೂ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದ ಹಿರಿಯ ಪ್ರಮುಖರು ಭಾಗವಹಿಸಲಿದ್ದಾರೆ.

ಈ ಸಂದರ್ಭ ಅವರು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಪರವಾಗಿ ಮತಯಾಚನೆ ನಡೆಸಲಿದ್ದಾರೆ.

ಸಭೆಯಲ್ಲಿ ಮೈತ್ರಿ ಪಕ್ಷಗಳ ವಿವಿಧ‌ ಕ್ಷೇತ್ರ ಸಮಿತಿ ಅಧ್ಯಕ್ಷರು, ತಾಲೂಕು ಅಧ್ಯಕ್ಷರು, ಬೂತ್‌ ಕಮಿಟಿ ಅಧ್ಯಕ್ಷರು ಮತ್ತು ಎಲ್ಲ ವಿಭಾಗಗಳ ಪದಾಧಿಕಾರಿಗಳು ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಜೆಡಿಎಸ್‌ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ ಮತ್ತು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು ತಿಳಿಸಿದ್ದಾರೆ.

ಸಿಎಂ ಆಗಮನದ ಹಿನ್ನೆಲೆ ಬ್ರಹತ್ ವೇದಿಕೆ ಸಿದ್ದವಾಗಿದ್ದು ೫-೭ ಸಾವಿರ ಜನರ ಆಗಮನದ ನಿರೀಕ್ಷೆಯಿದೆ.

Comments are closed.