ಕರಾವಳಿ

ಬಿಜೆಪಿ ಕಾರ್ಯಕರ್ತರೆನ್ನಲಾದ ಹಲವು ಮಂದಿ ಕಾಂಗ್ರೆಸ್ ಸೇರ್ಪಡೆ.

Pinterest LinkedIn Tumblr

ಮಂಗಳೂರು : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳೂರಿನ ಕಾಂಗ್ರೆಸ್ ಚುನಾವಣೆ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಮಂಗಳೂರಿನ ಅತ್ತಾವರ ವಾರ್ಡಿನ ಬಿಜೆಪಿ ಕಾರ್ಯಕರ್ತರು ಎನ್ನಲಾದ ಹಲವು ಮಂದಿ ಕಾಂಗ್ರೆಸ್ ಸೇರ್ಪಡೆಗೊಂಡರು.

ದಕ್ಷಿಣ ಬ್ಲಾಕ್ ಅಧ್ಯಕ್ಷ ಅಬ್ದುಲ್ ಸಲೀಂ ಅವರ ಸಮ್ಮುಖದಲ್ಲಿ ಅತ್ತಾವರ ವಾರ್ಡಿನ ಅಕ್ಷಯ್ ಕುಮಾರ್‌ ನೇತೃತ್ವದಲ್ಲಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ  ಅಕ್ಬರ್ ಆಲೀಂ, ಮಾಜಿ ಮೂಡಾ ಅಧ್ಯಕ್ಷ ತೇಜೋಮಯ, ಮಾಜಿ ಮೇಯರ್ ಮಹಾಬಲ ಮಾರ್ಲ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟಿ.ಕೆ.ಸುಧೀರ್, ಯುವ ಕಾಂಗ್ರೆಸ್ ಅಧ್ಯಕ್ಷ ಮೆರಿಲ್ ರೇಗೋ, ರಾಜ್ಯ ಕಾರ್ಯದರ್ಶಿ ಸುಹೈಲ್ ಕಂದಕ್, ರಾಜ್ಯ ಎಸ್.ಸಿ/ಎಸ್.ಟಿ ಘಟಕ ಸಹಸಂಚಾಲಕ ಹೊನ್ನಯ್ಯ, ವಾರ್ಡ ಅಧ್ಯಕ್ಷ ಜಯಂತ್ ಪೂಜಾರಿ, ಯುವ ಕಾಂಗ್ರೆಸ್ ಉಪಾಧ್ಯಕ್ಷ ರಮಾನಂದ ಪೂಜಾರಿ, ಮಾಜಿ ಕಾರ್ಪೋರೇಟರ್ ಭಾಸ್ಕರ್ ರಾವ್ ಮೊದಲಾದವರು ಉಪಸ್ಥಿತರಿದ್ದರು.

ಅತ್ತಾವರ ಬಾಬುಗುಡ್ಡೆ ಪ್ರದೇಶದ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದ ಹಲವರು ಬಿಜೆಪಿ ದ್ವಂದ್ವ ನೀತಿ ಧೋರಣೆಗಳಿಂದ ಅಸಮಾಧಾನಗೊಂಡು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಮಾಧ್ಯಮಕ್ಕೆ ತಿಳಿಸಿದ್ದಾರೆ.

Comments are closed.