ಕರಾವಳಿ

ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ಸಿಎಂ ಎಚ್ಡಿಕೆ: ಪೇಜಾವರ ಶ್ರೀ, ಪಲಿಮಾರು ಶ್ರೀಗಳ ಭೇಟಿ

Pinterest LinkedIn Tumblr

ಉಡುಪಿ: ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಆಗಮಿಸಿ ಶ್ರೀ ಕೃಷ್ಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆ.ಡಿ .ಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್,ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ,ವಿಧಾನ ಪರಿಷತ್ ಸದಸ್ಯ ಬೋಜೆ ಗೌಡ, ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.

ಬಳಿಕ ಪೇಜಾವರ ಮಠಕ್ಕೆ ಆಗಮಿಸಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಹಾಗೂ ಪೇಜಾವರ ಕಿರಿಯ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ನು ಭೇಟಿಯಾಗಿ ಅನುಗ್ರಹ ಮಂತ್ರಾಕ್ಷತೆ ಪಡೆದರು. ಶ್ರೀಪಾದರ ಆಪ್ತ ಕಾರ್ಯದರ್ಶಿ ವಿಷ್ಣುಮೂರ್ತಿ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು

Comments are closed.