ಮಂಗಳೂರು : ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಜಿಲ್ಲೆಯ ವಿವಿದೆಡೆಗಳಿಗೆ ತೆರಳಿ ಮತಯಾಚನೆ ಮಾಡಿದರು. ಜೊತೆಗೆ ತಮ್ಮ ಬೆಂಬಲಿಗರೊಂದಿಗೆ ಜಿಲ್ಲೆಯ ಹಲವು ಕ್ಷೇತ್ರಗಳಿಗೆ ತೆರಳಿ ದೇವರ ದರ್ಶನ ಪಡೆದು, ಸ್ವಾಮೀಜಿಗಳ ಆಶೀರ್ವಾದ ಪಡೆದರು.
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಲೋಕಸಭಾ ಅಭ್ಯರ್ಥಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಂಟ್ವಾಳ ತಾಲೂಕಿನ ಮಾನಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಶ್ರೀ ಕ್ಷೇತ್ರ ಓಡಿಯೂರು ಇಲ್ಲಿಗೆ ಭೇಟಿ ನೀಡಿ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಜಿಲ್ಲೆಯ ವಿವಿದೆಡೆಗಳಿಗೆ ತೆರಳಿ ಮತಯಾಚನೆ ಮಾಡಿದರು. ಬಳಿಕ ನಳಿನ್ ಕುಮಾರ್ ಕಟೀಲ್ ಅವರು ಕನ್ಯಾನ ಬಾಳೆಕೋಡಿ ಶ್ರೀ ಶಶಿಕಾಂತ ಸ್ವಾಮೀಜಿ ಮತ್ತು ಕಾಣಿಯೂರು ಶ್ರೀ ಮಹಾಬಲ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಪಕ್ಷದ ಪ್ರಮುಖರಾದ ಜಗದೀಶ್ ಅಧಿಕಾರಿ, ರಾಮಚಂದ್ರ ಬೈಕಂಪಾಡಿ, ಬದ್ರಿನಾಥ್ ಕಾಮತ್ ಹಾಗೂ ಇನ್ನಿತರ ಮುಖಂಡರು ಜೊತೆಗಿದ್ದರು.
ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಕಂಕನಾಡಿ ಬ್ರಹ್ಮ ಬೈದರ್ಕಳ ಗರೋಡಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಮಾಜಿ ಶಾಸಕ ಯೋಗೀಶ್ ಭಟ್, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ರವಿಶಂಕರ್ ಮಿಜಾರ್, ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಮಾಜಿ ಸಚಿವ ನಾಗರಾಜ್ ಶೆಟ್ಟಿ ಹಾಗೂ ಇನ್ನಿತರ ನಾಯಕರು ಜೊತೆಗಿದ್ದರು.
Comments are closed.