ಕರಾವಳಿ

ಪುತ್ತೂರಿನಲ್ಲಿ ಮಿಥುನ್ ರೈ ಚುನಾವಣಾ ಪ್ರಚಾರ : ವಿವಿಧ ಧಾರ್ಮಿಕ ಸ್ಥಳಗಳಿಗೆ ಭೇಟಿ

Pinterest LinkedIn Tumblr

ಮಂಗಳೂರು / ಪುತ್ತೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಿಥುನ್ ರೈ ಅವರು ಮಂಗಳವಾರ ಪುತ್ತೂರಿನ ವಿವಿದೆಡೆ ಚುನಾವಣಾ ಪ್ರಚಾರ ನಡೆಸಿದರು.

ಅದಕ್ಕೂ ಮುನ್ನ ವಿವಿಧ ಧಾರ್ಮಿಕ ಸ್ಥಳಗಳಿಗೆ ಭೇಟಿ ಕೊಟ್ಟು ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಆರಂಭದಲ್ಲಿ ಬಲ್ನಾಡು ದಂಡನಾಯಕ ಉಳ್ಳಾಳ್ತಿ ದೈವ ಸ್ಥಾನಕ್ಕೆ ಹಾಗೂ ಬಳಿಕ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ, ಮಾಜಿ ಶಾಸಕಿಯಾದ ಶ್ರೀಮತಿ ಶಕುಂತಲಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನವೀನ್ ಭಂಡಾರಿ, ಹೇಮನಾಥ ಶೆಟ್ಟಿ, ಪ್ರವೀಣ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.

Comments are closed.