ಕರಾವಳಿ

ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧ ದೂರು

Pinterest LinkedIn Tumblr

ಉಡುಪಿ: ಚುನಾವಣಾ ಆಯೋಗದ ಪೂರ್ವಾನುಮತಿ ಇಲ್ಲದೆ ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಮೈಕ್‌ ಬಳಸಿದ ಮುಸ್ಲಿಂ ಒಕ್ಕೂಟದ ಮುಖಂಡ ಇಕ್ಬಾಲ್‌ ಸಂಶುದ್ದೀನ್‌ ಮತ್ತು ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ವಿರುದ್ಧ ಕಾಪು ಪೊಲೀಸ್‌ ಠಾಣೆಯಲ್ಲಿ ನೀತಿ ಸಂಹಿತೆ ಪ್ರಕರಣ ದಾಖಲಾಗಿದೆ.

ರವಿವಾರ ಸಂಜೆ ಕಟಪಾಡಿ ಅಚÌಡದಲ್ಲಿರುವ ಇಕ್ಬಾಲ್‌ ಸಂಶುದ್ದೀನ್‌ ಮನೆಯಲ್ಲಿ ಮುಖ್ಯಮಂತ್ರಿ ಎಚ್‌. ಡಿ. ಕುಮಾರಸ್ವಾಮಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಸಭೆ ನಡೆಸಿದ್ದರು.

ಕಾಪು ಕ್ಷೇತ್ರದ ಚುನಾವಣಾ ಫ್ಲೆಯಿಂಗ್‌ ಸ್ಕ್ವಾಡ್‌ ಅಧಿಕಾರಿ ನಾಗರಾಜ್‌ ದೂರು ನೀಡಿದ್ದರು..

Comments are closed.