ಕರಾವಳಿ

ಅಪ್ರಾಪ್ತೆ ಮೇಲಿನ ಅತ್ಯಾಚಾರ ಆರೋಪ ಸಾಭೀತು: ಎ.12 ಶಿಕ್ಷೆ ಪ್ರಕಟ

Pinterest LinkedIn Tumblr

ಉಡುಪಿ: ಅಪ್ರಾಪ್ತ ವಯಸ್ಸಿನ ಬುದ್ದಿಮಾಂದ್ಯ ಯುವತಿಯೋರ್ವಳ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪೆರಂಪಳ್ಳಿಯ ಅರುಣ ಆಚಾರಿ(32) ಎಂಬಾತನ ಅಪರಾಧ ಸಾಬೀತಾಗಿದೆ ಎಂದು ಉಡುಪಿ ಜಿಲ್ಲಾ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಅರುಣ ಆಚಾರಿ 2016ರ ಜು.16ರಂದು ಬೆಳಗ್ಗೆ 8.30ರ ವೇಳೆಗೆ ಶಾಲೆಗೆ ಹೊರಟಿದ್ದ ಅಪ್ರಾಪ್ತ ವಯಸ್ಸಿನ ಯುವತಿಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಮಣಿಪಾಲದ ಎರಡು ಲಾಡ್ಜಿಗೆ ಕರೆದೊಯ್ದಿದ್ದು ಎರಡು ಕಡೆಯಲ್ಲಿ ಆತನಿಗೆ ಲಾಢ್ ರೂಂ ನೀಡಿರಲಿಲ್ಲ. ಬಳಿಕ ಆರೋಪಿ ಬಾಲಕಿಯನ್ನು ಪೆರಂಪಳ್ಳಿಯ ತನ್ನ ಮನೆಗೆ ಕರೆತಂದು ಅತ್ಯಾಚಾರವೆಸಗಿದ್ದ. ಈ ಬಗ್ಗೆ ಬಾಲಕಿಯ ತಂದೆ ಮಣಿಪಾಲ ಠಾಣೆಯಲ್ಲಿ ದೂರು ನೀಡಿದ್ದರು. ಪೋಕ್ಸೋ ಕಾಯಿದೆ ಮತ್ತು ಭಾರತೀಯ ದಂಡ ಸಂಹಿತೆ ಕಲಂನಡಿ ಪ್ರಕರಣ ದಾಖಲಾಗಿತ್ತು. ಅಂದಿನ ಪೊಲೀಸ್‌ ವೃತ್ತ ನಿರೀಕ್ಷಕರಾಗಿದ್ದ ಸಂಪತ್‌ ಕುಮಾರ್‌ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಜಿಲ್ಲಾ ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು. 30 ಸಾಕ್ಷಿದಾರರನ್ನು ವಿಚಾರಣೆಗೊಳಪಡಿಸಲಾಗಿತ್ತು. ವಾದ ಆಲಿಸಿದ ವಿಶೇಷ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಸಿ.ಎಂ.ಜೋಷಿ ಅವರು ಅಪರಾಧ ಸಾಬೀತಾಗಿರುವುದಾಗಿ ಎ.10ರಂದು ಪ್ರಕಟಿಸಿದರು. ಶಿಕ್ಷೆಯ ಪ್ರಮಾಣವನ್ನು ಎ.12ರಂದು ಪ್ರಕಟಿಸುವುದಾಗಿ ಘೋಷಿಸಿದರು. ಸರಕಾರದ ಪರವಾಗಿ ಜಿಲ್ಲಾ ವಿಶೇಷ ಸರಕಾರಿ ಅಭಿಯೋಜಕ ವಿಜಯ ವಾಸು ಪೂಜಾರಿ ವಾದ ಮಂಡಿಸಿದ್ದಾರೆ.

Comments are closed.