ಕರಾವಳಿ

ಮತ ಎಣಿಕೆಯ ದಿನ ಸಿಡಿಮದ್ದುಗಳ ಬಳಕೆ ನಿಷೇಧ

Pinterest LinkedIn Tumblr

ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆಯು ಮೇ 23 ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಜಿಲ್ಲೆಯ ಸಾರ್ವಜನಿಕ ಹಿತದೃಷ್ಟಿಯಿಂದ, ಕಾನೂನು ಸುವ್ಯವಸ್ಥೆ, ಶಾಂತಿಪಾಲನೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕಾಗಿರುತ್ತದೆ.

ಆದ್ದರಿಂದ ಚುನಾವಣೆಯ ಮತ ಎಣಿಕೆಯ ಫಲಿತಾಂಶದ ವಿಜಯೋತ್ಸವದ ಸಮಯದಲ್ಲಿ ಪಟಾಕಿ/ ಸಿಡಿಮದ್ದು ಸಿಡಿಸುವುದನ್ನು ತಡೆಗಟ್ಟುವ ಸಲುವಾಗಿ ಅವುಗಳ ಮಾರಾಟವನ್ನು ನಿಷೇಧಿಸುವುದು ಅಗತ್ಯವೆಂದು ಮನಗಂಡು, ಮೇ 22 ರಂದು ಬೆಳಗ್ಗೆ 10 ಗಂಟೆಯಿಂದ ಮೇ 24 ರ ಸಂಜೆ 5 ಗಂಟೆಯವರೆಗೆ ಜಿಲ್ಲೆಯಾದ್ಯಂತ ಯಾವುದೇ ರೀತಿಯ ಪಟಾಕಿ/ ಸಿಡಿಮದ್ದು ಸಿಡಿಸುವುದನ್ನು ಮತ್ತು ಮಾರಾಟ ಮಾಡುವುದನ್ನು ನಿಷೇಧಿಸಿ ಮತ್ತು ಅಂಗಡಿ/ ಮಳಿಗೆಗಳನ್ನು ಮುಚ್ಚಲು ಆದೇಶಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ.

Comments are closed.