ಕರಾವಳಿ

ಮಂಗಳೂರಿನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ ಆಚರಣೆ

Pinterest LinkedIn Tumblr

ಮಂಗಳೂರು, ಮೇ 21: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯತಿಥಿಯನ್ನು ಮಂಗಳವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಪಕ್ಷದ ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು, ಸುರೇಶ್ ಬಲ್ಲಾಳ್, ಬಿ.ಎ.ಮುಹಮ್ಮದ್ ಹನೀಫ್, ಅಬ್ಬಾಸ್ ಅಲಿ ಬೊಳಂತೂರು, ಕೆ.ಕೆ.ಶಾಹುಲ್ ಹಮೀದ್, ಶಶಿಧರ ಹೆಗ್ಡೆ, ನವೀನ್ ಡಿಸೋಜ, ಟಿ.ಕೆ ಸುಧೀರ್ ಮುಂತಾದವರು ಉಪಸ್ಥಿತರಿದ್ದರು.

Comments are closed.