ಕರಾವಳಿ

ಉಡುಪಿಯಲ್ಲಿ ಸ್ಟ್ರಾಂಗ್ ರೂಮ್ ಓಪನ್: ಮತ ಎಣಿಕೆ ಆರಂಭ; ಅಂಚೆ ಮತದಲ್ಲಿ ಶೋಭಾಗೆ ಮುನ್ನಡೆ

Pinterest LinkedIn Tumblr

ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಬಿರುಸಿನಿಂದ ಸಾಗುತ್ತಿದ್ದು ಸದ್ಯ ಅಂಚೆ ಮತಗಳ ಎಣಿಕೆ ಕಾರ್ಯ ಬಿರುಸಿನಿಂದ ಸಾಗುತ್ತಿದೆ. ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ನೇತೃತ್ವದಲ್ಲಿ ಸ್ಟ್ರಾಂಗ್ ರೂಮ್ ತೆರೆಯಲಾಗಿದ್ದು ಎಸ್ಪಿ ನಿಶಾ ಜೇಮ್ಸ್ ಈ ಸಂದರ್ಭ ಇದ್ದರು.

ನಗರದ ಸೈಂಟ್ ಸಿಸಿಲೀಸ್ ಶಾಲಾ ಆವರಣದಲ್ಲಿರುವ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆಗೆ ಮುನ್ನಡೆಯಿದೆ.  ಪ್ರತಿಸ್ಪರ್ಧಿ ಪ್ರಮೋದ್ ಮಧ್ವರಾಜ್ ಅವರಿಗಿಂತ 6700ಕ್ಕೂ ಅಧಿಕ ಮತವನ್ನು ಪಡೆದಿದ್ದಾರೆ.

ಇನ್ನು ಮತ ಎಣಿಕೆ ಹಿನ್ನೆಲೆ ಕಾಲೇಜು ಆವರಣಕ್ಕೆ ಪಕ್ಷಗಳ ಕಾರ್ಯಕರ್ತರು ಆಗಮಿಸಿದ್ದಾರೆ. ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

(ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.)

Comments are closed.