ಕರಾವಳಿ

ಉಡುಪಿ ಜಿಲ್ಲೆಯಲ್ಲಿ ಆಗಸ್ಟ್ 1ರಿಂದ ಮರಳುಗಾರಿಕೆ ನಿರಾತಂಕ?

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮರಳುಗಾರಿಕೆಯ ವಿಚಾರವಾಗಿ ಸಭೆ ನಡೆಸಿದರು. ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ಕೆ. ರಘುಪತಿ ಭಟ್, ಲಾಲಾಜಿ ಮೆಂಡನ್, ಸುಕುಮಾರ್ ಶೆಟ್ಟಿಯವರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಸಭೆ ನಡೆಸಿದರು.

ಆಗಸ್ಟ್ 1ರಿಂದ ಎಲ್ಲಾ ಮರಳು ಪರವಣಿದಾರರಿಗೆ ಮರಳು ಗಣಿಗಾರಿಕೆ ಪ್ರಾರಂಭಿಸಲು ಅನುಮತಿ ಕೊಡೋದಾಗಿ ಮತ್ತು ಆಗಸ್ಟ್ 1ರಿಂದ ಯಾವುದೇ ಕಾರಣಕ್ಕೂ ಹಿನ್ನಡೆಯಾಗದೆ ಸಿ.ಆರ್.ಝಡ್. ವ್ಯಾಪ್ತಿಯ ಮರಳುಗಾರಿಕೆಯನ್ನು ಪ್ರಾರಂಭಿಸಲು ಅಧಿಕಾರಿಗಳು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಸಿ.ಆರ್.ಝಡ್. ವ್ಯಾಪ್ತಿಯಲ್ಲಿರುವ ಹಲವಾರು ತಾಂತ್ರಿಕ ನ್ಯೂನತೆಗಳ ಬಗ್ಗೆ ಶಾಸಕ ಕೆ. ರಘುಪತಿ ಭಟ್ ಅವರು ಜಿಲ್ಲಾಧಿಕಾರಿಗಳ ಗಮನ ಸೆಳೆದಾಗ ಅದೆಲ್ಲವನ್ನೂ ಸರಿಪಡಿಸಿ ಮುಂದಿನ ಅವಧಿಯಿಂದ ಮರಳುಗಾರಿಕೆಯನ್ನು ಪ್ರಾರಂಭಿಸುವ ಬಗ್ಗೆ ಭರವಸೆಯನ್ನು ನೀಡಿದರು.

ಗಣಿ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಮುಂದಾಳತ್ವದಲ್ಲಿ ನಡೆದ ಈ ಸಭೆಯಲ್ಲಿ ಸಕಾರಾತ್ಮಕವಾದ ಬೆಳವಣಿಗೆಗಳು ಹಾಗೂ ನಿರ್ಧಾರಗಳು ಕಂಡು ಬಂದಿದ್ದರಿಂದ ಮುಂದಿನ ಅವಧಿಯಲ್ಲಿ ಯಾವುದೇ ಅಡೆತಡೆ ಇಲ್ಲದೆ ಮರಳುಗಾರಿಕೆ ಮಾಡಬಹುದು ಎಂಬ ವಿಶ್ವಾಸ ಮೂಡಿ ಬಂದಿದೆ ಎಂದು ಶಾಸಕ ರಘುಪತಿ ಭಟ್ ಅಭಿಪ್ರಾಯಪಟ್ಟರು.

Comments are closed.