ಕರಾವಳಿ

ಕರಾವಳಿಯಲ್ಲಿ ಚಂಡಮಾರುತ ಭೀತಿ: ಕಟ್ಟೆಚ್ಚರ

Pinterest LinkedIn Tumblr

ಉಡುಪಿ: ಮಳೆಯ ನಿರೀಕ್ಷೆಯಲ್ಲಿರುವ ಜನರಿಗೆ ಚಂಡಮಾರುತದ ಭೀತಿಯೂ ಇದೆ. ಅರಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಇನ್ನಷ್ಟು ತೀವ್ರಗೊಂಡು ಚಂಡಮಾರುತವಾಗಲಿದೆ.

ಇದರ ಪರಿಣಾಮ ಲಕ್ಷದ್ವೀಪ, ಕೇರಳ, ಕರ್ನಾಟಕ, ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಭಾರೀ ಗಾಳಿ-ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಪ್ರಸ್ತುತ ನಿರ್ಮಾಣವಾಗಿರುವ ವಾಯುಭಾರ ಕುಸಿತ 36 ಗಂಟೆಗಳಲ್ಲಿ ಚಂಡಮಾರುತದ ಸ್ವರೂಪ ಪಡೆಯಲಿದ್ದು, ವಾಯವ್ಯ ದಿಕ್ಕಿನತ್ತ ಚಲಿಸಲಿದೆ.

(ಸಾಂದರ್ಭಿಕ ಚಿತ್ರ)

ಸಮುದ್ರದಿಂದ ಕಿನಾರೆಯತ್ತ ಈಗಾಗಲೇ ರಭಸವಾಗಿ ಗಾಳಿ ಬೀಸಲಾರಂಭಿಸಿದೆ. ಇದು ಮುಂದಿನ 2-3 ದಿನ ಇನ್ನಷ್ಟು ತೀವ್ರಗೊಳ್ಳಲಿದೆ. ರವಿವಾರ ಕೇರಳ ಮತ್ತು ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35ರಿಂದ 45 ಕಿ.ಮೀ. ವೇಗದ ವರೆಗೆ ಗಾಳಿ ಬೀಸುತ್ತಿತ್ತು.

ಸೋಮವಾರ ಗಂಟೆಗೆ 40ರಿಂದ 55 ಕಿ.ಮೀ. ವರೆಗೂ ಗಾಳಿ ಬೀಸುವ ಸಂಭವ ಇದೆ. ಮಂಗಳವಾರ ಇದರ ವೇಗ ಮತ್ತಷ್ಟು ಹೆಚ್ಚಿ 55ರಿಂದ 65 ಕಿ.ಮೀ. ಇರುತ್ತದೆ. ಕೆಲವೊಮ್ಮೆ 75 ಕಿ.ಮೀ. ವರೆಗೂ ತಲುಪುವ ಸಂಭವ ಇದೆ.

ಜೂ. 12ರ ವೇಳೆಗೆ ಕರ್ನಾಟಕ ಕರಾವಳಿಯನ್ನು ದಾಟಿ ಮಹಾರಾಷ್ಟ್ರ ಮತ್ತು ಗುಜರಾತ್‌ ಕರಾವಳಿಯತ್ತ ಚಂಡಮಾರುತ ಚಲಿಸಲಿದೆ. ಈ ಸಂದರ್ಭ ಗಾಳಿ 70ರಿಂದ 80 ಕಿ.ಮೀ. ವರೆಗೆ ಹಾಗೂ 13ರಂದು 90ರಿಂದ 100 ಕಿ.ಮೀ. ವರೆಗೂ ತಲುಪಲಿದೆ. ಅನಂತರ ಚಂಡಮಾರುತದ ವೇಗ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Comments are closed.