ಕರಾವಳಿ

ವಾಯುಭಾರ ಕುಸಿತ- ಮೀನುಗರರು, ಸಾರ್ವಜನಿಕರು ಸುರಕ್ಷತೆ ಕ್ರಮ ವಹಿಸಲು ಸೂಚನೆ

Pinterest LinkedIn Tumblr

ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಮಳೆ ಕೇರಳ ರಾಜ್ಯಕ್ಕೆ ಜೂನ್ 8 ರಂದು ಪ್ರವೇಶಿಸಿದ್ದು, ಜೂನ್ 10 ರ ಒಳಗಾಗಿ ಕರ್ನಾಟಕ ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಕೆಲವು ಭಾಗಗಳಿಗೆ ವ್ಯಾಪಿಸಲಿದೆ.

(ಸಾಂದರ್ಭಿಕ ಚಿತ್ರ)

ಅರಭಿ ಸಮುದ್ರದಲ್ಲಿ ವಾಯುಭಾರ ಕುಸಿತವುಂಟಾಗುವ ಸಾಧ್ಯತೆಯಿರುವುದರಿಂದ ಮುಂದಿನ 2-3 ದಿನಗಳಲ್ಲಿ ರಾಜ್ಯದ ಕರಾವಳಿ ಒಳನಾಡು ಪ್ರದೇಶದ ಹಲವು ಭಾಗಗಳಲ್ಲಿ ಗಂಟೆಗೆ 35-45 ಕಿ.ಮೀ ವೇಗವಾಗಿ ಗಾಳಿ ಬೀಸಲಿದ್ದು, ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮುನ್ಸೂಚನೆ ನೀಡಿದೆ.

ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಸಾರ್ವಜನಿಕರು ಅಗತ್ಯ ಮುಂಜಾಗೃತ ಸುರಕ್ಷಾ ಕ್ರಮಗಳನ್ನು ವಹಿಸುವಂತೆ, ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ: 1077, ದೂರವಾಣಿ ಸಂಖ್ಯೆ: 0820-2574802 ಅನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.