ಮಂಗಳೂರು,ಜೂನ್ .10: ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ನಾಡಿನ ಸಾರಸ್ವತ ಕುಟುಂಬದವರಾದ ನಾಡಿನ ಹಿರಿಯ ಸಾಹಿತಿ, ರಂಗಭೂಮಿ ಹಾಗೂ ಸಿನಿಮಾ ನಟ, ದಿಗ್ದರ್ಶಕ ‘ಜ್ಞಾನ ಪೀಠ ಪ್ರಶಸ್ತಿ’ ಪುರಸ್ಕೃತ ಡಾ. ಗಿರೀಶ್ ಕಾರ್ನಾಡ್ ನಿಧನಕ್ಕೆ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಸಹಿತ ಅನೇಕ ಪ್ರಮುಖರು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ತಮ್ಮ ಅಮೂಲ್ಯ ಸಾಹಿತ್ಯ ಕೃತಿಗಳ ಮೂಲಕ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿರುವ ಕಾರ್ನಾಡರು, ತಮ್ಮ ಸಾಹಿತ್ಯ ಹಾಗೂ ಅಭಿನಯದ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ಅಸಾಮಾನ್ಯ ಪ್ರತಿಭಾನ್ವಿತರು ಎಂದು ಕಲ್ಕೂರ ಸಂತಾಪ ಸೂಚಿಸಿರುವರು.
ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ,ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕದ ಅಧ್ಯಕ್ಷೆ ವಿಜಯಲಕ್ಷ್ಮೀ ಬಿ. ಶೆಟ್ಟಿ, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ಪೂರ್ಣಿಮಾ ಪೇಜಾವರ, ಜನಾರ್ದನ ಹಂದೆಹಾಗೂ ಪೊಳಲಿ ನಿತ್ಯಾನಂದ ಕಾರಂತ ಮೊದಲಾದವರು ಸಂತಾಪ ಸೂಚಿಸಿದ್ದಾರೆ.