ಮಂಗಳೂರು : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಆಶ್ರಯದಲ್ಲಿ ಜೂನ್ 2ರಂದು ಅಡ್ಯಾರ್ ಗಾರ್ಡ್‌ನಲ್ಲಿ ನಡೆದ ಪಟ್ಲ ಸಂಭ್ರಮದ ಯಶಸ್ಸಿಗೆ ದುಡಿದ ಘಟಕಗಳ ಪದಾಧಿಕಾರಿಗಳಿಗೆ ಸದಸ್ಯರಿಗೆ ಧನ್ಯೋತ್ಸವ ಕಾರ್ಯಕ್ರಮವು ಬೆಂದೂರ್‌ವೆಲ್ ಬಳಿಯ ಅಭಿಮಾನ್ ಟೆಕ್ಸಸ್ ಕಮ್ಯುನಿಟಿ ಹಾಲ್‌ನಲ್ಲಿ ಆಯೋಜಿಸಲಾಗಿತ್ತು.
ಎಲ್ಲಾ ಘಟಕಗಳ ಪದಾಧಿಕಾರಿಗಳು ಸದಸ್ಯರು, ಕಲಾವಿದರು, ಮಹಿಳಾ ಘಟಕಗಳು ನಿರಂತರವಾಗಿ ಕೆಲಸ ಮಾಡಿದ ಪರಿಣಾಮ ಪಟ್ಲ ಸಂಭ್ರಮ ಅದ್ದೂರಿಯಾಗಿ ನೆರವೇರಿತು ಎಂದು ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಪಟ್ಲ ಗುತ್ತು ಸತೀಶ ಶೆಟ್ಟಿ ತಿಳಿಸಿದರು.
ಪಟ್ಲ ಸಂಭ್ರಮದ ಮೊದಲು ಕಲಾವಿದರಿಗೆ ಹಮ್ಮಿಕೊಂಡಿದ್ದ ಕ್ರೀಡಾಕೂಟವು ಯಶಸ್ವಿಯಾಗಿ ನಡೆದಿದ್ದು ಪಟ್ಲ ಸಂಭ್ರಮದ ಯಶಸ್ಸಿಗೆ ಇದು ಪೂರಕವಾಯಿತು ಎಂದು ಪಟ್ಲ ಸತೀಶ್ ಶೆಟ್ಟಿ ತಿಳಿಸಿದರು.
ಮುಂದಿನ ವರ್ಷ ಪಟ್ಲ ಸಂಭ್ರಮದ ೫ನೇ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ನಡೆಸಲು ಕಾರ್ಯ ಯೋಜನೆ ರೂಪಿಸಲಾಗುವುದು ಎಂದವರು ತಿಳಿಸಿದರು.
ಸಮಾರಂಭದಲ್ಲಿ ಮಂಗಳೂರು ಘಟಕದ ಸಂಚಾಲಕ ನಿಟ್ಟೆ ಗುತ್ತು ರವಿರಾಜ ಶೆಟ್ಟಿ, ಅಮೋಘ ಶಿಪ್ಪಿಂಗ್‌ನ ಮಾಲಕ ನಿತ್ಯಾನಂದ ಶೆಟ್ಟಿ, ಸವಣೂರು ಸೀತಾರಾಮ ರೈ, ಭುಜಬಲಿ ಧರ್ಮಸ್ಥಳ , ಲಕ್ಷ್ಮೀಶ ಭಂಡಾರಿ, ಜಯರಾಮ ಶೇಖ ಕೇಂದ್ರೀಯ ಘಟಕದ ಉಪಾಧ್ಯಕ್ಷ ಮನುರಾವ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಜತೆ ಕಾರ್ಯದರ್ಶಿ ರಾಜೀವ ಪೂಜಾರಿ ಕೈಕಂಬ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಜಗನ್ನಾಥ್ ಶೆಟ್ಟಿ ಬಾಳ, ದುರ್ಗಾಪ್ರಕಾಶ್ ಈರೋಡ್, ಮಹಿಳಾ ಘಟಕದ ಗೌರವಾಧ್ಯಕ್ಷೆ ಆರತಿ ಆಳ್ವ, ಅಧ್ಯಕ್ಷೆ ಪೂರ್ಣೀಮಾ ಯತೀಶ್ ರೈ ಮೊದಲಾದವರು ಉಪಸ್ಥಿತರಿದ್ದರು.
ಸರಪಾಡಿ ಅಶೋಕ ಶೆಟ್ಟಿ, ಭಾಸ್ಕರ ರೈ ಕುಕ್ಕುವಳ್ಳಿ, ಪ್ರದೀಪ್ ಆಳ್ವ ಕದ್ರಿ, ಪಡು ಶರತ್ ಶೆಟ್ಟಿ, ಕದ್ರಿ ನವನೀತ ಶೆಟ್ಟಿ, ಮಹವೀರ್ ಪಾಂಡಿ ಮೊದಲಾದವರು ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಕೇಂದ್ರೀಯ ಘಟಕದ ಗೌರವಾಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಬದಲಾಯಿಸುವಂತೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಸ್ವಾಗತಿಸಿ, ವಂದಿಸಿದರು.