ಕರಾವಳಿ

ಕಲ್ಲುಕೋರೆಗಳಲ್ಲಿ ಅವಘಡ ನಡೆದರೆ ಸಂಬಂಧಿತರ ವಿರುದ್ಧ ಕ್ರಿಮಿನಲ್ ಪ್ರಕರಣ

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಕಲ್ಲು ಗಣಿಗುತ್ತಿಗೆದಾರರಿಗೆ ಹಾಗೂ ಈಗಾಗಲೇ ಅವಧಿ ಮುಗಿದಿರುವ ಈ ಹಿಂದೆ ನಿರ್ವಹಿಸಿದ ಕಲ್ಲು ಗಣಿಗುತ್ತಿಗೆದಾರರೂ ಸಹ ಕಲ್ಲುಕೋರೆಗಳ ಸುತ್ತಲೂ ತಂತಿ ಬೇಲಿ ಅಳವಡಿಸಿ, ಅಪಾಯ ಪ್ರದೇಶ ಎಂಬ ಎಚ್ಚರಿಕೆಯ ಸೂಚನಾ ಫಲಕವನ್ನು ಅಳವಡಿಸಲು ಸೂಚಿಸಿದೆ. ಆದಾಗ್ಯೂ ಚಾಲ್ತಿ/ ಅವಧಿ ಮುಗಿದಿರುವ ಕಲ್ಲು ಗಣಿಗುತಿಗೆ ಪ್ರದೇಶದಲ್ಲಿ ಅವಘಡಗಳು ಸಂಭವಿಸಿದಲ್ಲಿ ಸಂಬಂಧಿಸಿದ ಕಲ್ಲು ಗಣಿ ಗುತ್ತಿಗೆದಾರರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು.

ಮಳೆಗಾಲದಲ್ಲಿ ಜಿಲ್ಲೆಯ ಕಲ್ಲು ಕೋರೆಗಳು ಹಾಗೂ ಈ ಹಿಂದೆ ನಿರ್ವಹಿಸಿದ ಕಲ್ಲು ಕೋರೆ ಗುಂಡಿಗಳಲ್ಲಿ ನೀರು ನೀರು ಸಂಗ್ರಹವಾಗಿರುತ್ತದೆ. ಆದ್ದರಿಂದ ನೀರು ತುಂಬಿರುವ ಕಲ್ಲುಕೋರೆ ಗುಂಡಿಗಳ ಬಳಿ ಮಹಿಳೆಯರು, ಮಕ್ಕಳು ಮತ್ತು ಸಾರ್ವಜನಿಕರು ತೆರಳದಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.