ಕರಾವಳಿ

ಜಿಂದಾಲ್’ಗೆ ಭೂಮಿ ಮಾರುವ ಸರಕಾರದ ಕ್ರಮಕ್ಕೆ ವಿರೋಧ; ಜಯಕರ್ನಾಟಕದಿಂದ ಹೋರಾಟದ ಎಚ್ಚರಿಕೆ

Pinterest LinkedIn Tumblr

ಉಡುಪಿ: ಬಳ್ಳಾರಿಯಲ್ಲಿ ಜಿಂದಾಲ್ ಕಂಪೆನಿಗೆ 3667 ಎಕರೆ ಭೂಮಿಯನ್ನು ರಾಜ್ಯ ಸರ್ಕಾರ ಮಾರಾಟ ಮಾಡಲು ಹೊರಟಿರುವ ಕ್ರಮವನ್ನು ಖಂಡಿಸಿ ಈ ಮಾರಾಟ ಪ್ರಕ್ರಿಯೆಯನ್ನು ಕೂಡಲೇ ಕೈ ಬಿಡಬೇಕೆಂದು ಉಡುಪಿ ಜಿಲ್ಲಾ ಜಯಕರ್ನಾಟಕ ಸಂಘಟನೆ ಆಗ್ರಹಿಸಿದೆ.

ಜಯಕರ್ನಾಟಕ ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ನೇತೃತ್ವದಲ್ಲಿ ಉಡುಪಿ ಅಪರ ಜಿಲ್ಲಾಧಿಕಾರಿಯವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಸರ್ಕಾರ ಮಾರಾಟ ಪ್ರಕ್ರಿಯೆಯನ್ನು ಈ ಕೂಡಲೇ ಕೈ ಬಿಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಸಂಘಟನೆಯ ವತಿಯಿಂದ ಉಗ್ರ ಹೋರಾಟದ ಎಚ್ಚರಿಕೆಯನ್ನು ಸಂಘಟನೆಯವರು ನೀಡಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಗೌರವ ಸಲಹೆಗಾರ ಸುಧಾಕರ ರಾವ್ ಬಾರ್ಕೂರು, ಜಿಲ್ಲಾ ಮುಖಂಡ ಎಸ್.ಎಸ್ ತೋನ್ಸೆ, ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಅಮೀನ್, ಕಾರ್ಯಾಧ್ಯಕ್ಷ ಶರತ್ ಶೆಟ್ಟಿ, ಹೋರಾಟ ಸಮಿತಿ ಅಧ್ಯಕ್ಷ ಕರುಣಾಕರ ಪೂಜಾರಿ, ಜಿಲ್ಲಾ ಸಂಚಾಲಕ ಅಣ್ಣಪ್ಪ ಕುಲಾಲ್, ಮಣಿಪಾಲ ಘಟಕದ ಲೂವಿಸ್ ಮಣಿಪಾಲ, ಉಪಾಧ್ಯಕ್ಷ ಮಹೇಶ್ ಉಪ್ಪೂರು, ಜಿಲ್ಲಾ ಸಮಿತಿಯ ನಿತಿನ್ ಕೋಟ, ವಿಶ್ವನಾಥ ವಾರಂಬಳ್ಳಿ, ಪವನ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Comments are closed.