ಕರಾವಳಿ

ಕರ್ನಾಟಕ ಜಾನಪದ ಪರಿಷತ್ ಕೇರಳ ಗಡಿನಾಡ ಘಟಕದ ವತಿಯಿಂದ ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್‌ಗೆ ಸಮ್ಮಾನ

Pinterest LinkedIn Tumblr

ಮಂಗಳೂರು. ಕರ್ನಾಟಕ ಜಾನಪದ ಪರಿಷತ್ ಕೇರಳ ಗಡಿನಾಡ ಘಟಕ ಹಾಗೂ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಸಂಯುಕ್ತ ಆಶ್ರಯದಲ್ಲಿ ಬದಿಯಡ್ಕದಲ್ಲಿ ಮಕ್ಕಳ ಜಾನಪದ ಮೇಳ ಹಾಗೂ ಸಾಹಿತಿ ದಿವಂಗತ ಕೇಳು ಮಾಸ್ಟರ್ ಸ್ಮರಣಾರ್ಥ ಕನ್ನಡ ಶಾಲೆಗಳ ಗ್ರಂಥಾಲಯಗಳಿಗೆ ಪುಸ್ತಕ ವಿತರಣಾ ಸಮಾರಂಭದಲ್ಲಿ ಕ್ರೀಡಾ ಅಂಕಣಕಾರ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರನ್ನು ಸಮ್ಮಾನಿಸಲಾಯಿತು.

ಬದಿಯಡ್ಕದ ಗುರುಸದನ ಸಭಾಂಗಣ ದಲ್ಲಿ ನಡೆದ ಈ ಸಮಾರಂಭದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಉಪ ಸಭಾಪತಿ ಶ್ರೀ ಎಸ್.ಎಲ್.ಧರ್ಮೇಗೌಡ ಇವರು ಎಸ್.ಜಗದೀಶ್ಚಂದ್ರ ಅಂಚನ್ ಅವರನ್ನು ಸನ್ಮಾನಿಸಿದರು .

ಕಳೆದ 27 ವರ್ಷಗಳಿಂದ ಕ್ರೀಡಾ ಬರವಣಿಗೆ ಮೂಲಕ ವಿವಿಧ ಪತ್ರಿಕೆಗಳಲ್ಲಿ ಗುರುತಿಸಿಕೊಂಡಿರುವ ಜಗದೀಶ್ಚಂದ್ರ ಅವರು ಕನ್ನಡ ನಾಡು ನುಡಿಗಾಗಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಕರ್ನಾಟಕ ಜಾನಪದ ಪರಿಷತ್, ಕೇರಳ ಗಡಿನಾಡ ಘಟಕದ ಪ್ರಶಸ್ತಿ ಪತ್ರದ ಜೊತೆ ಸ್ಮರಣಿಕೆ ನೀಡಿ ಸಮ್ಮಾನಿಸಲಾಯಿತು. ಹಲವಾರು ಪ್ರಶಸ್ತಿಗಳ ಜೊತೆಗೆ 2016ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ , 2018ರ ಗಡಿ ನಾಡ ರಾಜ್ಯೋತ್ಸವ ಪ್ರಶಸ್ತಿ , 2019ರ ಕರ್ನಾಟಕ ಜಾನಪದ ಪರಿಷತ್ ರಾಜ್ಯ ಪ್ರಶಸ್ತಿಗಳನ್ನು ಜಗದೀಶ್ಚಂದ್ರ ಪಡೆದು ಕೊಂಡಿದ್ದಾರೆ .

ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ. ವಸುಂಧರಾ ಭೂಪತಿ , ದಕ್ಷಿಣ ಕನ್ನಡ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀ ಪ್ರದೀಪ್ ಕುಮಾರ್ ಕಲ್ಕೂರ , ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕೆ.ಎನ್.ಕೃಷ್ಣ ಭಟ್ , ಕುಂಬ್ಳೆ ಉಪ ಜಿಲ್ಲಾ ವಿದ್ಯಾಧಿಕಾರಿ ಶ್ರೀ ಯತೀಶ್ ಕುಮಾರ್,ಕರ್ನಾಟಕ ಜಾನಪದ ಪರಿಷತ್ತಿನ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಶ್ರೀ ಎ.ಆರ್.ಸುಬ್ಬಯ್ಯಕಟ್ಟೆ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ, ಕಾರ್ಯದರ್ಶಿ ಶ್ರೀ ಅಖೀಲೇಶ್ ನಗುಮುಗಂ, ಶ್ರೀ ಶ್ರೀಕಾಂತ್ ನೆಟ್ಟಣಿಗೆ ಹಾಗೂ ರವಿ ನಾಯ್ಯಾಪು ಮೊದಲಾದವರು ಉಪಸ್ಥಿತರಿದ್ದರು.

Comments are closed.