ಕರಾವಳಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಸಂಚಾಲಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ವಿದೇಶಯಾನ

Pinterest LinkedIn Tumblr

ನ್ಯೂಜೆರ್ಸಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಅಮೇರಿಕಾ ಘಟಕ ಉದ್ಘಾಟನೆ 

ಮಂಗಳೂರು: ‘ಯಕ್ಷಾಂಗಣ ಮಂಗಳೂರು’ ಯಕ್ಷಗಾನ ಚಿಂತನ – ಮಂಥನ ಮತ್ತು ಪ್ರದರ್ಶನ ವೇದಿಕೆಯ ಕಾರ್ಯಾಧ್ಯಕ್ಷ ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ಹವ್ಯಾಸಿ ಘಟಕದ ಸಂಚಾಲಕ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ ಅವರು ಜೂನ್29 ರಂದು ಅಮೇರಿಕಾದ ನ್ಯೂಜೆರ್ಸಿಯಲ್ಲಿ ಜರಗುವ ಪಟ್ಲ ಫೌಂಡೇಶನ್ ನ ಅಮೇರಿಕಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಈ ಸಂದರ್ಭ ನಗರದ ಉಡ್ ಲ್ಯಾಂಡ್ಸ್ ನಲ್ಲಿ ಜರಗಿದ ಯಕ್ಷಾಂಗಣದ ಕಾರ್ಯಕಾರಿಣಿ ಸಭೆಯಲ್ಲಿ ಅವರನ್ನು ಅಭಿನಂದಿಸಲಾಯ್ತು. ಸಭೆಯಲ್ಲಿ ವಿಶೇಷ ಅತಿಥಿಗಳಾಗಿ ಭಾಗವಹಿಸಿದ ಖ್ಯಾತ ಲೆಕ್ಕ ಪರಿಶೋಧಕ ಎಸ್.ಎಸ್.ನಾಯಕ್ ಮತ್ತು ಮುಂಬಯಿ ಕಲಾಜಗತ್ತಿನ ರೂವಾರಿ ಡಾ.ತೋನ್ಸೆ ವಿಜಯಕುಮಾರ್ ಶೆಟ್ಟಿ ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಶುಭ ಕೋರಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾದ ಎ.ಶಿವಾನಂದ ಕರ್ಕೇರ , ತಾರಾನಾಥ ಗಟ್ಟಿ ಕಾಪಿಕಾಡ್, ಯಕ್ಷಾಂಗಣದ ಪದಾಧಿಕಾರಿಗಳಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ತೋನ್ಸೆ ಪುಷ್ಕಳ ಕುಮಾರ್, ಕರುಣಾಕರ ಶೆಟ್ಟಿ ಪಣಿಯೂರು, ಅಶೋಕ್ ಮಾಡ ಕುದ್ರಾಡಿಗುತ್ತು, ಸುಧಾಕರ ರಾವ್ ಪೇಜಾವರ, ಎಂ.ಸುಂದರ ಶೆಟ್ಟಿ ಬೆಟ್ಟಂಪಾಡಿ, ತೀರ್ಥಹಳ್ಳಿ ವಿಶ್ವನಾಥ ಶೆಟ್ಟಿ, ಜಾನಪದ ತಜ್ಞ ಕೆ.ಕೆ.ಪೇಜಾವರ, ಸಂಗೀತ ನಿರ್ದೇಶಕ ಸತೀಶ್ ಸುರತ್ಕಲ್ ವಿದೇಶಯಾನಕ್ಕೆ ಶುಭ ಹಾರೈಸಿದರು.

Comments are closed.