ಕರಾವಳಿ

ವಾರ್ಡ್’ನ ಕಾಮಗಾರಿ ವಿಚಾರದಲ್ಲಿ ಆರೋಗ್ಯ ನಿರೀಕ್ಷಕರಿಗೆ ಹಲ್ಲೆ ಮಾಡಿದ ನಗರಸಭೆ ಸದಸ್ಯ!

Pinterest LinkedIn Tumblr

ಉಡುಪಿ: ಉಡುಪಿ ನಗರಸಭೆ ಸದಸ್ಯರೊಬ್ಬರು ಕಿರಿಯ ಆರೋಗ್ಯ ನಿರೀಕ್ಷಕರ ಮೇಲೆ ಹಲ್ಲೆ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ. ಪ್ರಸನ್ನ ಕುಮಾರ್ ಹಲ್ಲೆಗೊಳಗಾದ ವ್ಯಕ್ತಿ. ಮಲ್ಪೆ ವಡಬಾಂಡೇಶ್ವರ ವಾರ್ಡ್ ಬಿಜೆಪಿ ಸದಸ್ಯ ಯೋಗೀಶ್ ಎಂಬುವರು ಪ್ರಸನ್ನ ಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ನಗರ ಸಭಾ ಸದಸ್ಯ ಯೋಗೀಶ್ ಇಂದು ಆರೋಗ್ಯ ನಿರೀಕ್ಷಕರ ಕಚೇರಿಗೆ ಆಗಮಿಸಿ ವಾರ್ಡ್ ಕಾಮಗಾರಿಯೊಂದರ ವಿಚಾರಕ್ಕೆ ಸಂಬಂಧಿಸಿ ಏಕವಚನದಲ್ಲಿ ನಿಂದಿಸಿದ್ದಲ್ಲದೆ, ಹಲ್ಲೆ ನಡೆಸಿದ್ದಾರೆ ಎಂದು ಪ್ರಸನ್ನ ಕುಮಾರ್ ಆರೋಪಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಪ್ರಸನ್ನ ಕುಮಾರ್ ಅವರನ್ನು ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಉಡುಪಿ ನಗರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲಿಸಿ ತನಿಖೆ ಆರಂಭಿಸಿದ್ದಾರೆ. ಹಲ್ಲೆಯನ್ನು ಖಂಡಿಸಿ ನಗರಸಭೆ ‌ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.

Comments are closed.