ಕರಾವಳಿ

ಹಿರಿಯ ಸಾಹಿತಿ ಆಳ್ವರಿಗೆ ಬಂಟರ ಮಾತೃ ಸಂಘದಿಂದ ನುಡಿನಮನ

Pinterest LinkedIn Tumblr

ಮಂಗಳೂರು: ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವ ಹಾಗೂ ನಿಟ್ಟೆಗುತ್ತು ಮುಕ್ತಾ ಆರ್.ಶೆಟ್ಟಿ ಅವರ ನಿಧನಕ್ಕೆ ಬಂಟರ ಯಾನೆ ನಾಡವರ ಮಾತೃ ಸಂಘದಿಂದ ನುಡಿನಮನ ಕಾರ್ಯಕ್ರಮ ನಡೆಯಿತು.

ಬಂಟ್ಸ್‌ಹಾಸ್ಟೆಲ್‌ನಲ್ಲಿರುವ ಅಮೃತೋತ್ಸವ ಕಟ್ಟಡದಲ್ಲಿ ಜರಗಿದ ನುಡಿನಮನ ಕಾರ್ಯಕ್ರಮದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‌ಕುಮಾರ್ ರೈ ಮಾಲಾಡಿ ಭಾಗವಹಿಸಿ ಮಾತನಾಡಿ, ಏರ್ಯ ಲಕ್ಷ್ಮೀನಾರಾಯಣ ಆಳ್ವ ಅವರು ಈ ಹಿಂದೆ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿದ್ದು, ಸಮಾಜಪರ ಕೆಲಸ ಮಾಡಿದವರು, ಸಾಹಿತಿಯಾಗಿ ಅವರ ಸಾಧನೆ ದೊಡ್ಡದು. ಸಾಂಸ್ಕೃತಿಕ, ಧಾರ್ಮಿಕ, ಸಾಮಾಜಿಕ ಹೀಗೇ ಎಲ್ಲಾ ಕ್ಷೇತ್ರಗಳಲ್ಲಿ ಏರ್ಯ ಲಕ್ಷ್ಮೀನಾರಾಯಣ ಆಳ್ವರವರು ದುಡಿದಿದ್ದಾರೆ. ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ ಎಂದು ಅವರು ತಿಳಿಸಿದರು.

ದಿ. ರಘುರಾಮಶೆಟ್ಟಿ ಇವರ ಧರ್ಮಪತ್ನಿ ನಿಟ್ಟೆಗುತ್ತು ಮುಕ್ತಾ ಆರ್.ಶೆಟ್ಟಿ ಅವರು ದೈವ ಭಕ್ತರಾಗಿದ್ದು, ಸಂಸ್ಕಾರಯುತ ಬದುಕು ಸವೆದವರು ಎಂದು ಬಂಟರ ಯಾನೆ ನಾಡವರ ಮಾತೃಸಂಘದ ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ತಿಳಿಸಿದರು.

ನುಡಿನಮನ ಕಾರ್ಯಕ್ರಮದಲ್ಲಿ ಮಂಗಳೂರು ತಾಲೂಕು ಸಮಿತಿ ಸಂಚಾಲಕ ಜಯರಾಮ ಸಾಂತ, ಉಪಸಂಚಾಲಕ ಉಮೇಶ್ ರೈ ಪದವು ಮೇಗಿನ ಮನೆ, ಮಂಗಳೂರು ತಾಲೂಕು ಬಂಟರ ಸಂಘದ ಅಧ್ಯಕ್ಷ ನಿಟ್ಟೆಗುತ್ತು ರವಿರಾಜ ಶೆಟ್ಟಿ, ಪದಾಧಿಕಾರಿಗಳಾದ ಆನಂದಶೆಟ್ಟಿ, ರವೀಂದ್ರನಾಥ ಶೆಟ್ಟಿ, ಜಯಲಕ್ಷ್ಮೀ ಶೆಟ್ಟಿ, ನಿವೇದಿತಾ ಶೆಟ್ಟಿ , ಸುಲತ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Comments are closed.