ಮಂಗಳೂರು : ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ಶ್ರೀ ಕ್ಷೇತ್ರದ ಪಟ್ಟೆ ಲಿಂಗಪ್ಪ ಆಚಾರ್ಯ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಶ್ರೀ ಗುರುಮಠದ ಪ್ರಧಾನ ಅರ್ಚಕರಾದ ಸುದರ್ಶನ್ ಪುರೋಹಿತ್ ರವರ ಪ್ರಧಾನ ಆಚಾರ್ಯತ್ವದಲ್ಲಿ ಜರಗಿತು.
ಕ್ಷೇತ್ರದ ಆಡಳಿತ ಮೊಕ್ತೇಸರರಾದ ಕೆ. ಕೇಶವ ಆಚಾರ್ಯ, ಮೊಕ್ತೇಸರರಾದ ಸುಂದರ ಆಚಾರ್ಯ ಬೆಳುವಾಯಿ, ಎ. ಲೋಕೇಶ್ ಆಚಾರ್ಯ ಬಿಜೈ, ಆಡಳಿತ ಮಂಡಳಿ ಹಾಗು ಜೀರ್ಣೋದ್ದಾರ ಸಮಿತಿಯ ಮತ್ತು ಶ್ರೀ ಕಾಳಿಕಾಂಬಾ ಸೇವಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು .
ವಿಶ್ವಬ್ರಾಹ್ಮಣ ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ವನಿತಾ ಉಪೇಂದ್ರ ಆಚಾರ್ಯ, ಅನೇಕ ಮಹಿಳೆಯರು ಭಾಗವಹಿಸಿದ್ದರು .
Comments are closed.