ಕರಾವಳಿ

ರಾಜ್ಯದ ಹಲೆವೆಡೆ ನೆರೆ ಹಿನ್ನೆಲೆ ಸರಳವಾಗಿ ಸ್ವಾತಂತ್ರ್ಯ ದಿನ ಆಚರಿಸಲು ಸರ್ಕಾರದ ನಿರ್ಧಾರ!

Pinterest LinkedIn Tumblr

ಬೆಂಗಳೂರು: ಹಲವು ಜಿಲ್ಲೆಗಳಲ್ಲಿ ತೀವ್ರ ಪ್ರವಾಹದಿಂದ ತತ್ತರಿಸಿರುವ ಹಿನ್ನಲೆ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ ಅಧಿಕಾರಿಗಳೇ ಅಂದು ಧ್ವಜಾರೋಹಣ ಕಾರ್ಯ ನಡೆಸಲು ಸರಕಾರ ಆದೇಶಿಸಿದೆ.

(ಸಾಂದರ್ಭಿಕ ಚಿತ್ರ)

ಈ ಬಗ್ಗೆ ಸರಕಾರದ ಮುಖ್ಯ ಕಾರ್ಯದರ್ಶಿಗಳು ಅಧಿಕೃತ ಆದೇಶ ಹೊರಸಿದ್ದು ಆಗಸ್ಟ್ 15 ರಂದು ಜಿಲ್ಲಾ ಮಟ್ಟಗಳಲ್ಲಿ ಜಿಲ್ಲಾಧಿಕಾರಿಗಳು,ಉಪವಿಭಾಗಗಳ ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದಲ್ಲಿ ತಹಸೀಲ್ದಾರ್ ಧ್ವಜಾರೋಹಣ ನಡೆಸುವಂತೆ ಆದೇಶಿಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ಈ ಆದೇಶ ನೀಡಲಾಗಿದೆ. ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು ಮತ್ತು ವರಿಷ್ಟಾಧಿಕಾರಿಗಳಿಗೆ ಈ ಆದೇಶ ರವಾನಿಸಲಾಗಿದೆ.

Comments are closed.