ಉಡುಪಿ: ಉಡುಪಿಯ ಬೀಡಿನಗುಡ್ಡೆಯ ಮಹಾತ್ಮ ಗಾಂಧೀ ಬಯಲು ರಂಗ ಮಂದಿರದಲ್ಲಿ 73 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಗುರುವಾರ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ದ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ನೀತಾ ಗುರುರಾಜ ಪೂಜಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧೂ ಬಿ ರೂಪೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್,ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಪೌರಾಯುಕ್ತ ಆನಂದ್ ಕಲ್ಲೋಳಿಕರ್ , ಎಎಸ್ಪಿ ಕುಮಾರ ಚಂದ್ರ ಉಪಸ್ಥಿತರಿದ್ದರು.
2019 ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಹಾಗೂ ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ವಿಶೇಷ ಚೇತನರಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 2018-19 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 2019 ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಗಳನ್ನು ವಿತರಿಸಲಾಯಿತು.2018-19 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಗಳನ್ನು ವಿತರಿಸಲಾಯಿತು.ರಸ್ತೆ ಸುರಕ್ಷೆ ಕುರಿತು ಉತ್ತಮ ಕೆಲಸ ಮಾಡಿದ 3 ಶಾಲೆಗಳಿಗೆ ಪ್ರಶಸ್ತಿ ವಿತರಿಸಲಾಯಿತು.
ಅಖಿಲ ಭಾರತ ಪೊಲೀಸ್ ಕರ್ತವ್ಯ ಕೂಟದಲ್ಲಿ , ಪ್ರಶಸ್ತಿ ಪಡೆದ ಶಂಕರ ಕುಲಾಲ ಮತ್ತು ಕರ್ತವ್ಯ ನಿರ್ವಹಣೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ ಅಗ್ನಿಶಾಮಕ ಇಲಾಖೆ ಅಧಿಕಾರಿ ವಸಂತ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
Comments are closed.