ಉಡುಪಿ: ಕರ್ನಾಟಕ ಸರ್ಕಾರದ ನೂತನ ಮೀನುಗಾರಿಕೆ ಹಾಗೂ ಬಂದರು ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಉಡುಪಿ ಜಿಲ್ಲಾ ಜಯಕರ್ನಾಟಕ ಸಂಘಟನೆಯಯವರು ಭೇಟಿಯಾದರು. ಇದೇ ಸಂದರ್ಭ ಸಂಘಟನೆ ವತಿಯಿಂದ ಉಡುಪಿ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ನೇತೃತ್ವದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಗೌರವ ಸಲಹೆಗಾರ ಸುಧಾಕರ ರಾವ್ ಬಾರ್ಕೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಅಮೀನ್, ಕಾರ್ಯಾಧ್ಯಕ್ಷ ಶರತ್ ಶೆಟ್ಟಿ, ಹೋರಾಟ ಸಮಿತಿ ಅಧ್ಯಕ್ಷ ಕರುಣಾಕರ ಪೂಜಾರಿ, ಮಣಿಪಾಲ ಘಟಕದ ಅಧ್ಯಕ್ಷ ಲೂಯಿಸ್ ಮಣಿಪಾಲ, ಜಿಲ್ಲಾ ಸಮಿತಿಯ ನಿತಿನ್ ಕೋಟ, ವಿವೇಕ್ ಕಲ್ಮಾಡಿ ಮತ್ತಿತರರು ಉಪಸ್ಥಿತರಿದ್ದರು
Comments are closed.