ಕರಾವಳಿ

ಗ್ರಾಮೀಣ ಜನರಲ್ಲಿ ನೈರ್ಮಲ್ಯ ಬಗ್ಗೆ ಜಾಗೃತಿ : ಸ್ವಚ್ಛ ಸರ್ವೇಕ್ಷಣಾ ಕಲಾಜಾಥಕ್ಕೆ ಚಾಲನೆ

Pinterest LinkedIn Tumblr

ಮಂಗಳೂರು : ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮೀಣ ಕರ್ನಾಟಕವನ್ನು “ಬಯಲು ಬಹಿರ್ದೆಸೆ ಮುಕ್ತ” ಎಂದು ಪೋಷಣೆ ಮಾಡಲಾಗಿದ್ದು, ಗ್ರಾಮೀಣ ಸಮುದಾಯದಲ್ಲಿ ಶೌಚಾಲಯ ಬಳಕೆ ಮತ್ತು “ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ-2019”ರ ಕುರಿತು ಗ್ರಾಮೀಣ ಜನರಿಗೆ ಅರಿವು ಮೂಡಿಸಬೇಕಿದೆ.

ಈ ಹಿನ್ನೆಲೆಯಲ್ಲಿ ಗ್ರಾಮೀಣ ಜನರಲ್ಲಿ ನೈರ್ಮಲ್ಯ ವಿಷಯಗಳ ಬಗ್ಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸುವ ದೃಷ್ಟಿಯಿಂದ ಪ್ರಸಕ್ರ ವರ್ಷದಲ್ಲಿ ಮೊದಲ ಹಂತದಲ್ಲಿ 2000 ಗ್ರಾಮ ಪಂಚಾಯತಿಗಳಲ್ಲಿ ನೀರು ಮತ್ತು ನೈರ್ಮಲ್ಯ ಕುರಿತು ಜಾಗೃತಿ ಮೂಡಿಸಿ “ತ್ಯಾಜ್ಯ ಮುಕ್ತ ಗ್ರಾಮ’ಗಳನ್ನಾಗಿ ರೂಪಿಸುವ ಗುರಿ ಹೊಂದಲಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಕಲಾಜಾಥವು ಜಿಲ್ಲೆಯ ಆಯ್ದ ಗ್ರಾಮ ಪಂಚಾಯತ್‍ಗಳಲ್ಲಿ ಸಂಚಾರಿ ವಾಹನದ ಮೂಲಕ ಕಲಾಜಾಥ ಕಾರ್ಯಕ್ರಮ ವನ್ನು (ಶ್ರವ್ಯ, ದೃಶ್ಯ ಮಾಧ್ಯಮ,ಬೀದಿ ನಾಟಕ, ಇತ್ಯಾದಿ ಸಾಂಸ್ಕøತಿಕ ಕಾರ್ಯಕ್ರಮಗಳು ಮತ್ತು ಸಿನಿಮಾ, ಡಾಕ್ಯೂಮೆಂಟರಿ, ಜಾಹೀರಾತು, ಕಿರುಚಿತ್ರ ಪ್ರದರ್ಶನ)ವನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಆಯೋಜಿಸುತ್ತಿದೆ.

ಮಂಗಳವಾರ ಜಿ.ಪಂ. ಆವರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ನ ಉಪಾಧ್ಯಕ್ಷೆ ಕಸ್ತೂರಿ ಪಂಜ ಇವರು ಹಸಿರು ನಿಶಾನೆ ತೋರಿಸಿ ಕಲಾಜಾಥಕ್ಕೆ ಚಾಲನೆಯನ್ನು ನೀಡಿದರು.

ಜಿಲ್ಲಾ ಪಂಚಾಯತ್‍ನ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸೆಲ್ವಮಣಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

Comments are closed.